ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು : ಹೈಕಮಾಂಡ್ ಭೇಟಿಯಾಗಲಿರುವ ಸಿಎಂ ಯೋಗಿ - ಬಿಜೆಪಿ ಹೈಕಮಾಂಡ್ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ..

UP CM Yogi Adityanath to discuss govt formation with BJP leadership in Delhi today
ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು: ಪಕ್ಷದ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ ಯೋಗಿ

By

Published : Mar 13, 2022, 8:48 AM IST

ನವದೆಹಲಿ :ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಸರ್ಕಾರ ರಚನೆಯ ಭಾಗವಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ದೆಹಲಿಗೆ ಭೇಟಿ ನೀಡಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹೈಕಮಾಂಡ್​ನೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಯಾವಾಗ ನಡೆಯಬೇಕು ಎಂಬ ಕುರಿತು ಮತ್ತು ನೂತನ ಸಚಿವ ಸಂಪುಟದ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ. ಲಖನೌನಿಂದ ಹಿಂಡನ್ ವಿಮಾನ ನಿಲ್ದಾಣಕ್ಕೆ ತೆರಳಲಿರುವ ಯೋಗಿ ಅಲ್ಲಿಂದ ರಸ್ತೆ ಮಾರ್ಗವಾಗಿ ತೆರಳಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ:ದೇವಭೂಮಿ ಉತ್ತರಾಖಂಡ್​ಗೆ ಮೊದಲ ಮಹಿಳಾ ಸಿಎಂ.. 'ರಿತು ಖಂಡೂರಿ'ಗೆ ಬಿಜೆಪಿ ಹೈಕಮಾಂಡ್ ಮಣೆ?

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಗೆಲುವಿನ ನಂತರ ಆದಿತ್ಯನಾಥ್ ಶುಕ್ರವಾರ ಲಖನೌದಲ್ಲಿರುವ ಪಕ್ಷದ ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿ, ಈಗಾಗಲೇ ಸಂಪುಟ ರಚನೆ ಬಗ್ಗೆ ಮಾತುಕತೆ ನಡೆಸಿದ್ದಾರೆ.

ABOUT THE AUTHOR

...view details