ಬಾಗ್‌ಪತ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾಗ್‌ಪತ್‌ನ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪತ್ನಿ ಸಾವನ್ನಪ್ಪಿದ್ದಾರೆ. ಪತಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಉತ್ತರ ಪ್ರದೇಶದ ಬಾಗ್‌ಪತ್ ವ್ಯಾಪಾರಿಯೊಬ್ಬರು ತಮ್ಮ ಪತ್ನಿಯೊಂದಿಗೆ ಫೇಸ್‌ಬುಕ್‌ನಲ್ಲಿ ಲೈವ್ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷದಂತಹ ಪದಾರ್ಥ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಇಬ್ಬರನ್ನೂ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿ ಸಾವನ್ನಪ್ಪಿದ್ದು, ಪತಿ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಈ ದಂಪತಿ ಡಿಮಾನಿಟೈಸೇಷನ್ ಮತ್ತು ಜಿಎಸ್‌ಟಿಯಿಂದ ನಮ್ಮ ಜೀವನ ತತ್ತರವಾಯಿತು ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಕಳೆದ ಹಲವು ಸಮಯದಿಂದ ಇವರ ಪಾದರಕ್ಷೆ ವ್ಯಾಪಾರ ಸರಿಯಾಗಿ ನಡೆಯುತ್ತಿರಲಿಲ್ಲ ಮತ್ತು ಆರ್ಥಿಕ ಸ್ಥಿತಿ ಹದಗೆಟ್ಟಿತ್ತು.