ಕರ್ನಾಟಕ

karnataka

ETV Bharat / bharat

ಯುಪಿಯಲ್ಲಿ ದಲಿತ ಮಹಿಳೆಯ ಅತ್ಯಾಚಾರ, ಬರ್ಬರ ಹತ್ಯೆ: ಬಿಜೆಪಿ ಸರ್ಕಾರದ ವಿರುದ್ಧ ಅಖಿಲೇಶ್ ಆಕ್ರೋಶ

Dalit woman raped and killed in UP: ಉತ್ತರ ಪ್ರದೇಶದ ಬಾಂದಾ ವ್ಯಾಪ್ತಿಗೆ ಬರುವ ಗ್ರಾಮವೊಂದರಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಹಿಳೆಯರ ಸುರಕ್ಷತೆ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯುಪಿ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದಾರೆ.

Dalit woman raped
ದಲಿತ ಮಹಿಳೆಯ ಮೇಲೆ ಅತ್ಯಾಚಾರ, ಬರ್ಬರ ಕೊಲೆ

By PTI

Published : Nov 3, 2023, 12:41 PM IST

ಬಂದಾ (ಉತ್ತರ ಪ್ರದೇಶ):ಇಲ್ಲಿನಗ್ರಾಮವೊಂದರಲ್ಲಿ 40 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ನಂತರ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳವಾರ (ಅ.31ರಂದು), ಮಹಿಳೆಯು ರಾಜ್‌ಕುಮಾರ್ ಶುಕ್ಲಾ ಎಂಬವರ ಹಿಟ್ಟಿನ ಗಿರಣಿ ಸ್ವಚ್ಛಗೊಳಿಸಲು ಅವರ ಮನೆಗೆ ತೆರಳಿದ್ದರು. ಆಕೆಯ 20 ವರ್ಷದ ಮಗಳು ಕೂಡಾ ಅಲ್ಲಿಗೆ ತಲುಪಿದ್ದರು. ಮನೆಯೊಳಗಿನಿಂದ ಚಿಲಕ ಹಾಕಿದ ಕೋಣೆಯಿಂದ ಮಹಿಳೆಯ ಕಿರುಚಾಟ ಕೇಳಿ ಬಂದಿದೆ. ಇದನ್ನು ಗಮನಿಸಿದ ಪುತ್ರಿ ಗಾಬರಿಯಾಗಿದ್ದಾರೆ. ಸ್ವಲ್ಪ ಸಮಯದ ನಂತರ ಕೋಣೆಯ ಬಾಗಿಲು ತೆರೆದಾಗ ತಾಯಿಯ ಶವ ಮೂರು ತುಂಡುಗಳಾಗಿ ಬಿದ್ದಿರುವುದನ್ನು ನೋಡಿದ ಪುತ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಆರೋಪಿಗಳ ವಿರುದ್ಧ ಎಫ್‌ಐಆರ್:''ರಾಜ್‌ಕುಮಾರ್ ಶುಕ್ಲಾ ಅವರ ಸಹೋದರ ಬೌವಾ ಶುಕ್ಲಾ ಮತ್ತು ರಾಮಕೃಷ್ಣ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ'' ಎಂದು ಠಾಣಾಧಿಕಾರಿ (ಎಸ್‌ಎಚ್‌ಒ) ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ಕಿಡಿ:ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಘಟನೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ''ಬಂದಾದಲ್ಲಿ ದಲಿತ ಮಹಿಳೆ ಅತ್ಯಾಚಾರ ಮತ್ತು ಬರ್ಬರ ಹತ್ಯೆಯ ಘಟನೆ ಹೃದಯ ವಿದ್ರಾವಕವಾಗಿದೆ. ಉತ್ತರ ಪ್ರದೇಶದ ಮಹಿಳೆಯರು ಭಯದಲ್ಲಿ ಜೀವನ ನಡೆಸುತ್ತದೆ. ಈ ಘಟನೆಯಿಂದ ಆಕ್ರೋಶಗೊಂಡಿದ್ದಾರೆ'' ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಐಐಟಿ-ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳನ್ನು ವಿವಸ್ತ್ರಗೊಳಿಸಿ ಅಸಭ್ಯ ವಿಡಿಯೋಗಳನ್ನು ರೆಕಾರ್ಡ್ ಮಾಡಿದ ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಉಲ್ಲೇಖಿಸಿದ್ದಾರೆ. "ಐಐಟಿ-ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಜೊತೆಗೆ ಅಸಭ್ಯ ವರ್ತನೆ ಮಾಡಿ ನಂತರ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿದ ಘಟನೆಯು ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮುಖದ ಮೇಲೆ ಕಪಾಳ ಮೋಕ್ಷವಾಗಿದೆ. ಬಿಜೆಪಿಯ ಶೂನ್ಯ ಸಹಿಷ್ಣುತೆಯ ದೊಡ್ಡ ಸುಳ್ಳನ್ನು ಬಹಿರಂಗಪಡಿಸುತ್ತದೆ" ಎಂದು ಕಿಡಿಕಾರಿದ್ದಾರೆ.

"ಉತ್ತರ ಪ್ರದೇಶದ ಮಹಿಳೆಯರು ಬಿಜೆಪಿ ಸರ್ಕಾರದ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಈಗ ಈ ಸರ್ಕಾರದಿಂದ ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಅರ್ಥಹೀನವಾಗಿದೆ" ಎಂದು ಅಖಿಲೇಶ್ ಯಾದವ್ ಹೇಳಿದರು. ಐಐಟಿ-ಬಿಎಚ್‌ಯು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ವಿಡಿಯೋವನ್ನು ಎಸ್‌ಪಿ ಮುಖ್ಯಸ್ಥರು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಹಾಡಹಗಲೇ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆಯ ತಾಯಿಗೆ ಪ್ರಾಣ ಬೆದರಿಕೆ

ABOUT THE AUTHOR

...view details