ಲಖೀಂಪುರ ಖೇರಿ(ಉತ್ತರ ಪ್ರದೇಶ):ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆದು, ಹಲವು ರೈತರ ಸಾವಿಗೆ ಕಾರಣವಾಗಿದ್ದ ಲಖೀಂಪುರ ಖೇರಿ ಜಿಲ್ಲೆಯಲ್ಲಿನ ಎಲ್ಲ 8 ವಿಧಾನಸಭೆ ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖೀಂಪುರದಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ್ದರು. ಈ ಘಟನೆಯ ಬಳಿಕ ದೊಡ್ಡ ಮಟ್ಟದ ಹಿಂಸಾಚಾರ ಉಂಟಾಗಿ ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದರು. ಇದು ದೇಶಾದ್ಯಂತ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಭಾರತೀಯ ಜನತಾ ಪಾರ್ಟಿ ವಿರುದ್ಧ ಪ್ರತಿಭಟನೆಗೂ ಕಾರಣವಾಗಿತ್ತು.