ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ತನ್ನ ಎರಡನೇ ಅವಧಿಯ ಮೊದಲ ಬಜೆಟ್ ಮಂಡಿಸಿತು. ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿ ಮಾತನಾಡಿ, ರಾಜ್ಯದ ಆರ್ಥಿಕತೆ ವೇಗವಾಗಿ ವೃದ್ಧಿಯಾಗುತ್ತಿದ್ದು ಒಂದು ಶತಕೋಟಿ ಡಾಲರ್‌ಗೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಭದ್ರತೆಗೆ 276 ಕೋಟಿ ರೂ.: ರಾಜ್ಯದ ನ್ಯಾಯಾಲಯಗಳು, ಐತಿಹಾಸಿಕ ಸ್ಥಳಗಳು ಮತ್ತು ಧಾರ್ಮಿಕ ಕ್ಷೇತ್ರಗಳ ಭದ್ರತೆಗೆ ಸರ್ಕಾರ ವಿಶೇಷ ಗಮನ ಕೊಟ್ಟಿದೆ. ಅಯೋಧ್ಯೆ, ಕಾಶಿ ಮತ್ತು ಮಥುರಾ ಸೇರಿ ಪ್ರಮುಖ ಸ್ಥಳಗಳಲ್ಲಿ ಭದ್ರತೆಗೆಂದು 276 ಕೋಟಿ ರೂ. ಮೀಸಲಿಡಲಾಗಿದೆ ಎಂದು ಖನ್ನಾ ತಿಳಿಸಿದರು.