ಸಂತಕಬೀರ್ ನಗರ(ಉತ್ತರ ಪ್ರದೇಶ):ಇಡೀ ನಾಗರಿಕ ಸಮಾಜವೇ ನಾಚಿಕೆಪಡುವಂತಹ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. 12 ವರ್ಷದ ಬಾಲೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು, ಆಕೆ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆ ಥಳಿಸಿ ವೈದ್ಯರಿಂದ ಗರ್ಭಪಾತ ಮಾಡಿಸಿದ್ದಾರೆ. ಸಂತ ಕಬೀರ್ ನಗರದ ಮಾಹುಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಲಕಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡ್ತಿದ್ದಾಳೆ. ಕಳೆದ ಕೆಲ ತಿಂಗಳ ಹಿಂದೆ ನಡೆದ ಘಟನೆ ಇದು. ಶಾಲೆಗೆ ರಜೆಯಿದ್ದ ಕಾರಣ ಮನೆಯಿಂದ ಹೊರಹೋಗಿದ್ದಾಗ ಗ್ರಾಮದ ನಿವಾಸಿಗಳಾದ ಮನೋಜ್ ಮತ್ತು ಗೋಪಾಲ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಕೊಲೆ ಬೆದರಿಕೆ ಹಾಕಿ ಮೇಲಿಂದ ಮೇಲೆ ದುಷ್ಕೃತ್ಯವೆಸಗಿದ್ದಾರೆ. ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಾಲಕಿ ಮನೆಯಲ್ಲಿ ವಿಷಯ ಹೇಳಲೇ ಇಲ್ಲ. ಈ ನಡುವೆ ಆಕೆ ಗರ್ಭಿಣಿಯಾಗಿದ್ದೂ ಮನೆಯವರಿಗೆ ಕೊನೆಗೂ ವಿಚಾರ ತಿಳಿಸಿದ್ದಾಳೆ.