ಕರ್ನಾಟಕ

karnataka

ETV Bharat / bharat

ಮಕ್ಕಳ ಕಳ್ಳಸಾಗಣೆ ಪ್ರಕರಣ: 16 ಮಂದಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು - ಮಕ್ಕಳ ಕಳ್ಳಸಾಗಾಣಿಕೆ

ಉತ್ತರ ಪ್ರದೇಶದ ಅಲಿಗಢ ನಗರದಲ್ಲಿ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು, ದಂಧೆಯಲ್ಲಿ ತೊಡಗಿದ್ದ 16 ಜನರನ್ನು ಬಂಧಿಸಿದ್ದಾರೆ.

UP Police
ಉತ್ತರ ಪ್ರದೇಶ ಪೊಲೀಸರು

By

Published : Jul 27, 2021, 12:15 PM IST

ಅಲಿಗಢ(ಉತ್ತರ ಪ್ರದೇಶ): ಇತ್ತೀಚಿನ ದಿನಗಳಲ್ಲಿ ಮಕ್ಕಳ ಕಳ್ಳಸಾಗಣಿಕೆ ಪ್ರಕರಣಗಳು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಸಂಬಂಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ಅಂತಹದ್ದೇ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಭೇದಿಸಿದ್ದಾರೆ.

ಅಲಿಗಢ ನಗರದಲ್ಲಿ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಅಪಹರಣಕ್ಕೊಳಗಾದ ಐವರು ಮಕ್ಕಳನ್ನು ಪೊಲೀಸರು ರಕ್ಷಿಸಿದ್ದು, ದಂಧೆಯಲ್ಲಿ ತೊಡಗಿದ್ದ 16 ಮಂದಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಇತ್ತೀಚಿಗೆ ಕರ್ನಾಟಕದ ಮಂಗಳೂರಿನಲ್ಲಿ ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಶ್ರೀಲಂಕಾದಿಂದ ಕೆನಡಾಗೆ ಮಾನವ ಕಳ್ಳಸಾಗಣೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿದ್ದರು. ಇವರಿಗೆ ಎಲ್​ಟಿಟಿಇ ಪ್ರಭಾವ ಇರುವ ಶಂಕೆ ಹಿನ್ನೆಲೆ ಈ ಪ್ರಕರಣವನ್ನು ಎನ್​ಐಎಗೆ ವಹಿಸಲಾಗಿದೆ.

ABOUT THE AUTHOR

...view details