ಕರ್ನಾಟಕ

karnataka

ETV Bharat / bharat

ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆ ಮೇಲೆ ದಾಳಿ : 8 ಜನರ ಬಂಧನ, 133 ಶಸ್ತ್ರಾಸ್ತ್ರ ವಶಕ್ಕೆ

ಉತ್ತರಪ್ರದೇಶದ ಮೀರತ್​ನಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಗಳ ಮೇಲೆ ಎಸ್‌ಟಿಎಫ್ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಗಳ ಮೇಲೆ ದಾಳಿ
UP police raided illegal arms factory

By

Published : Mar 28, 2021, 12:17 PM IST

ಮೀರತ್ (ಉತ್ತರ ಪ್ರದೇಶ):ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿಸಿದ್ದಾರೆ.

ಮೀರತ್​ನಲ್ಲಿರುವ ಎರಡು ಕಾರ್ಖಾನೆಗಳ ಮೇಲೆ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಎಂಟು ಜನರನ್ನು ಬಂಧಿಸಿ ಕಾರ್ಖಾನೆಯಲ್ಲಿದ್ದ ಸುಮಾರು 133 ಶಸ್ತ್ರಾಸ್ತ್ರಗಳು ಸೇರಿದಂತೆ ಒಂದು ನಾಡ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ.

ಓದಿ: ತಂದೆಯ ಜೊತೆ ವಿಷ ಸೇವಿಸಿದ ಪುತ್ರಿಯರು: ಇಬ್ಬರು ಸಾವು

ಇನ್ನು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾದ ಎಸ್‌ಟಿಎಫ್ ಮತ್ತು ಸ್ಥಳೀಯ ಪೊಲೀಸರ ತಂಡಕ್ಕೆ 2 ಲಕ್ಷ ರೂ.ಗಳನ್ನು ಬಹುಮಾನವಾಗಿ ನೀಡಲಾಗಿದೆ ಎಂದು ಮೀರತ್​​ನ ಎಸ್‌ಎಸ್‌ಪಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.

ABOUT THE AUTHOR

...view details