ಕರ್ನಾಟಕ

karnataka

ETV Bharat / bharat

ಶಾಲೆಯಿಂದ ಮರಳುತ್ತಿದ್ದ ವಿದ್ಯಾರ್ಥಿನಿಗೆ ಪೊಲೀಸ್​ ಕಾನ್ಸ್‌ಟೇಬಲ್‌ ಲೈಂಗಿಕ ದೌರ್ಜನ್ಯ; ಕೆಲಸದಿಂದ ಅಮಾನತು - ಈಟಿವಿ ಭಾರತ ಕನ್ನಡ

ಶಾಲೆಯಿಂದ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್‌ಸ್ಟೇಬಲ್‌ ಅಮಾನತಾಗಿದ್ದಾರೆ.

ಸಾದತ್​ ಅಲಿ
ಸಾದತ್​ ಅಲಿ

By

Published : May 5, 2023, 12:06 PM IST

ಪೊಲೀಸ್​ ಪೇದೆ ಕಿರುಕುಳ ವೈರಲ್​ ವಿಡಿಯೋ

ಲಕ್ನೋ (ಉತ್ತರ ಪ್ರದೇಶ):ಇಲ್ಲಿನಕ್ಯಾಂಟ್ ಪ್ರದೇಶದಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಬೆನ್ನಟ್ಟಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ ಸಾದತ್ ಅಲಿ ಎಂಬಾತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಶೀಘ್ರದಲ್ಲೇ ಕೆಲಸದಿಂದಲೂ ವಜಾಗೊಳಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಆರೋಪಿ ಕಾನ್‌ಸ್ಟೇಬಲ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ಜೈಲಿಗೆ ಕಳುಹಿಸಲಾಗಿದೆ.

ಕ್ಯಾಂಟ್ ಇನ್ಸ್‌ಪೆಕ್ಟರ್ ರಾಜ್‌ಕುಮಾರ್ ನೀಡಿರುವ ಮಾಹಿತಿ ಪ್ರಕಾರ, ಕಾನ್‌ಸ್ಟೇಬಲ್ ಸಾದತ್ ಅಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮಂಗಳವಾರ ವೈರಲ್​ ಆಗಿದೆ. ವಿಡಿಯೋದಲ್ಲಿ ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ​ ಕಿರುಕುಳ ನೀಡುತ್ತಿರುವುದು ಸ್ಪಷ್ಟವಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯ ತಾಯಿ ಆರೋಪಿ ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆಯ ವಿಡಿಯೋ ವೈರಲ್​ ಆಗುತ್ತಿದ್ದಂತೆ ಡಿಸಿಪಿ ಹೃದಯೇಶ್ ಕುಮಾರ್, ಸಾದತ್​ ಅಲಿಯನ್ನು ಅಮಾನತುಗೊಳಿಸಿದ್ದಾರೆ. ಬಂಧಿತರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಕೆಲಸದಿಂದ ವಜಾಗೊಳಿಸಲು ಸಿದ್ಧತೆ ನಡೆಸಲಾಗಿದೆ. ವಿಡಿಯೋ ಆಧಾರದ ಮೇಲೆ ಚರ್ಚಿಸಲಾಗುತ್ತಿದೆ ಎಂದು ಇನ್ಸ್‌ಪೆಕ್ಟರ್ ಹೇಳಿದರು. ಬಂಧಿತ ಕಾನ್‌ಸ್ಟೇಬಲ್ ಇತರೆ ಕೆಲವು ವಿದ್ಯಾರ್ಥಿನಿಯರ ಮೊಬೈಲ್​ ನಂಬರ್‌ ಕೊಡುವಂತೆ ಪೀಡಿಸಿದ್ದ ಎಂಬ ಅಂಶವೂ ಬಯಲಿಗೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬುಧವಾರ ಮೋಹನ್‌ಲಾಲ್‌ಗಂಜ್‌ನಿಂದ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಸಾದತ್ ಅಲಿ, ಕ್ಯಾಂಟ್‌ನಲ್ಲಿ ಶಾಲೆಯಿಂದ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಕಿರುಕುಳ ನೀಡಿದ್ದಾನೆ. ಘಟನೆಯ ಎಲ್ಲ ದೃಶ್ಯವನ್ನು ಮಹಿಳೆಯೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಗಮನಸಿದ ಯುಪಿ ಪೊಲೀಸರು ಸಾದತ್​ ಅಲಿಯನ್ನು ಹುದ್ದೆಯಿಂದ ಅಮಾನತು ಮಾಡಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ:ಮಣಿಪುರ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಣದಲ್ಲಿದೆ- ಭಾರತೀಯ ಸೇನೆ

ABOUT THE AUTHOR

...view details