ಕರ್ನಾಟಕ

karnataka

ETV Bharat / bharat

ಅಕ್ರಮ ಸಂಬಂಧಕ್ಕೆ ಜಗಳ; ಗಂಡನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ ಪತ್ನಿ

ಅಕ್ರಮ ಸಂಬಂಧದ ಸಲುವಾಗಿ ಜಗಳವಾಡಿದ್ದಕ್ಕಾಗಿ ಇಲ್ಲೊಬ್ಬ ಮಹಿಳೆ ತನ್ನ ಪತಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಹಾಕಿದ್ದಾಳೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Mathra woman sets her husband ablaze
Mathra woman sets her husband ablaze

By

Published : Aug 9, 2022, 7:03 PM IST

ಮಥುರಾ(ಉತ್ತರ ಪ್ರದೇಶ):ಕಟ್ಟಿಕೊಂಡ ಗಂಡನ ಮೇಲೆ ಪೆಟ್ರೋಲ್ ಸುರಿದ ಹೆಂಡತಿ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಕೋಸಿಕಲಾ ಪೊಲೀಸ್ ಠಾಣಾ ವ್ಯಾಪ್ತಿಯ ಮೀನಾ ನಗರ ಕಾಲೋನಿಯಲ್ಲಿ ಪ್ರಕರಣ ನಡೆದಿದೆ.

ಹೆಂಡತಿ ಬೇರೆ ವ್ಯಕ್ತಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳಂತೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿದಾಗ ಪತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಸಿಕಲಾ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಅನುಜ್ ಕುಮಾರ್ ಮಾತನಾಡಿ, "ಸೋಮವಾರ ಈ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮಂಗಳವಾರ ಮೃತಪಟ್ಟಿದ್ದಾನೆ. ಮೃತನ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಆರೋಪಿ ಮಹಿಳೆಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.

ಇದನ್ನೂ ಓದಿ:ಗಂಗಾವತಿ ಚೂರಿ ಇರಿತ ಪ್ರಕರಣ: 7 ಯುವಕರ ಮೇಲೆ ಎಫ್ಐಆರ್ ದಾಖಲು

ABOUT THE AUTHOR

...view details