ಕರ್ನಾಟಕ

karnataka

ETV Bharat / bharat

ಕುಲ್ಗಮ್ ಗುಂಡಿನ ಚಕಮಕಿ ಅಂತ್ಯ: ಉಗ್ರನ ಸದೆಬಡಿದ ಸೇನೆ - J&K: Kulgam gunfight ends

ಜಿಲ್ಲೆಯ ಮೀರ್ ಬಜಾರ್ ಪ್ರದೇಶದ ಮೂಲಕ ಹಾದುಹೋಗುತ್ತಿದ್ದ ಬಿಎಸ್‌ಎಫ್ ಬೆಂಗಾವಲಿನ ಮೇಲೆ ಅಪರಿಚಿತ ಉಗ್ರರು ಗುಂಡು ಹಾರಿಸಿದ್ದರು. ಈ ಹಿನ್ನೆಲೆ ಅವರನ್ನು ಸದೆಬಡಿಯಲು ಸೇನಾ ಕಾರ್ಯಾಚರಣೆ ಕೈಗೊಂಡಿತ್ತು.

Update - J&K: Kulgam gunfight ends, one militant killed; traffic on the highway to be resumed soon
ಓರ್ವ ಉಗ್ರನನ್ನು ಸದೆಬಡಿದ ಸೇನೆ

By

Published : Aug 13, 2021, 3:47 PM IST

ಕುಲ್ಗಮ್ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಉಗ್ರನನ್ನು ಸದೆಬಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಕುಲ್ಗಾಂನ ಮೀರ್ ಬಜಾರ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅಪರಿಚಿತ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಗುಂಡಿನ ಚಕಮಕಿಯಿಂದಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯ ಮೀರ್ ಬಜಾರ್ ಪ್ರದೇಶದ ಮೂಲಕ ಹಾದುಹೋಗುತ್ತಿದ್ದ ಬಿಎಸ್‌ಎಫ್ ಬೆಂಗಾವಲಿನ ಮೇಲೆ ಅಪರಿಚಿತ ಉಗ್ರರು ಗುಂಡು ಹಾರಿಸಿದ ನಂತರ ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರು, ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಸೇನಾ ಜವಾನ ಗಾಯಗೊಂಡಿದ್ದಾರೆ ಎಂದು ಐಜಿಪಿ ನಿನ್ನೆ ಹೇಳಿದ್ದರು.

ABOUT THE AUTHOR

...view details