ಕೇಂದ್ರ ಲೋಕ ಸೇವಾ ಆಯೋಗದಿಂದ (UPSC) ಇಂಜಿನಿಯರಿಂಗ್ ಸರ್ವೀಸ್ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 167 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್ ಹುದ್ದೆ ಭರ್ತಿಗೆ ನಡೆಸಲಾಗುವುದು ಗ್ರೂಪ್ ಎ ಮತ್ತು ಬಿ ಮಟ್ಟದ ಹುದ್ದೆ ಇದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಸಿವಿಲ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವಿಧ ಇಲಾಖೆಗೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಒಟ್ಟು 167 ಹುದ್ದೆ ಭರ್ತಿ ಮಾಡಲಾಗುವುದು
ವಿದ್ಯಾರ್ಹತೆ: ಅಭ್ಯರ್ಥಿಗಳು ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯೂನಿಕೇಷನ್ ವಿಷಯದಲ್ಲಿ ಬಿಇ ಪದವಿ ಅಥವಾ ಡಿಪ್ಲೋಮಾ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಠ 30 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳಾ, ಎಸ್ಸಿ, ಎಸ್ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ಅಭ್ಯರ್ಥಿಗಳು ಒಟಿಆರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ಮುಂದುವರೆಯಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.
ಈ ಹುದ್ದೆಗಳಿಗೆ ದೇಶದ ವಿವಿಧ ರಾಜ್ಯದ ಪ್ರಮುಖ ನಗರದಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಸಲಾಗಿದ್ದು, ಕರ್ನಾಟಕ ಅಭ್ಯರ್ಥಿಗಳು ಬೆಂಗಳೂರು ಕ್ಷೇತ್ರದಲ್ಲಿ ಪರೀಕ್ಷೆ ಎದುರಿಸಬಹುದಾಗಿದೆ. ನಕಾರಾತ್ಮಕ ಉತ್ತರಗಳಿಗೆ ಅಂಕ ಕಡಿತ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಸೆಪ್ಟೆಂಬರ್ 6ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 26 ಆಗಿದೆ. ಈ ಪರೀಕ್ಷೆಯ ಪ್ರಿಲಿಮ್ಸ್ ಫೆಬ್ರವರಿ 18ರಂದು ನಡೆಸುವ ಸಾಧ್ಯತೆ ಇದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು upsc.gov.inಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ:Job Alert! ಎಸ್‌ಬಿಐನಿಂದ 2,000 ಪಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ