ವಾಷಿಂಗ್ಟನ್(ಅಮೆರಿಕ):2008ರ ಮುಂಬೈ ಸ್ಫೋಟದ ಪ್ರಮುಖ ಆರೋಪಿ ತಹವ್ವೂರ್ ಹುಸೈನ್ ರಾಣಾ ಗಡಿಪಾರು ಅರ್ಜಿ ವಿಚಾರಣೆಯನ್ನು ಅಮೆರಿಕದ ಫೆಡರಲ್ ಕೋರ್ಟ್ ಗುರುವಾರ ನಡೆಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿಯೂ ಆಗಿರುವ ತಹವ್ವೂರ್ ರಾಣಾ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದ್ದು, ಭಾರತದ ಅಧಿಕಾರಿಗಳ ತಂಡವೊಂದು ವಿಚಾರಣೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪಾಕಿಸ್ತಾನ ಮೂಲದ ಅಮೆರಿಕ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯ ಬಾಲ್ಯ ಸ್ನೇಹಿತನಾದ 59 ವರ್ಷದ ತಹವ್ವೂರ್ ರಾಣಾನನ್ನು ಲಾಸ್ ಏಂಜಲೀಸ್ನಲ್ಲಿ 2020ರ ಜೂನ್ 10ರಂದು ಬಂಧಿಸಲಾಗಿತ್ತು. ಈ ವೇಳೆ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿತ್ತು.