ನವದೆಹಲಿ: ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆ. ಅಮೆರಿಕದಿಂದ ಅಲ್ಲಿನ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಬೈಡನ್ ಪ್ರಯಣ ಆರಂಭಿಸಿದ್ದರು. ಇಂದು ಸಂಜೆ 7 ಗಂಟೆ ಭಾರತಕ್ಕೆ ತಲುಪಿದ್ದಾರೆ. 2021ರ ಜನವರಿಯಲ್ಲಿ ಅಮೆರಿಕ ಅಧ್ಯಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬೈಡನ್ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ.
ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೈಡನ್ ಅವರನ್ನು ಕೇಂದ್ರ ಸಚಿವ ವಿಕೆ ಸಿಂಗ್ ಬರಮಾಡಿಕೊಂಡರು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಉಭಯ ನಾಯಕರು ಜೂನ್‌ನಲ್ಲಿ ವಾಷಿಂಗ್ಟನ್‌ಗೆ ಪ್ರಧಾನಿ ಮೋದಿ ಅವರ ಅಧಿಕೃತ ಭೇಟಿಯ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ಪ್ರಗತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ.
ಇದನ್ನೂ ಓದಿ:G20 Summit: ಬ್ರಿಟನ್ ಪ್ರಧಾನಿಯಾಗಿ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿದ ರಿಷಿ ಸುನಕ್
ಜಿ-20 ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕ ಅಧ್ಯಕ್ಷರು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ (ಸಿಡಿಸಿ) ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಪ್ರಥಮ ಮಹಿಳೆ, 72 ವರ್ಷದ ಜಿಲ್ ಬೈಡನ್ ಸೋಮವಾರ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅಧ್ಯಕ್ಷ, 80 ವರ್ಷದ ಬೈಡನ್ ಅವರಿಗೆ ಸೋಮವಾರ ಮತ್ತು ಮಂಗಳವಾರ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಪಟ್ಟರು. ಅವರ ಎರಡೂ ಪರೀಕ್ಷೆಗಳು ನೆಗೆಟಿವ್ ಎಂದು ಬಂದಿವೆ ಎಂದು ಶ್ವೇತಭವನ ಮಾಹಿತಿ ನೀಡಿದೆ.