ನವದೆಹಲಿ:ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ರಾಜ್ಯದ ಭಾರತೀಯ ಜನತಾ ಪಕ್ಷದ ಸಂಸತ್ ಸದಸ್ಯರು (ಸಂಸದರು) ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಯುಪಿ ಸಂಸದರ ಸಭೆ ನಡೆಯಲಿದೆ ಎನ್ನಲಾಗಿದೆ.
ಯುಪಿ ಚುನಾವಣೆ: ರಣತಂತ್ರ ಹೆಣೆಯಲು ನಡ್ಡಾ ನೇತೃತ್ವದಲ್ಲಿ ಸಭೆ!
ವಿಧಾನಸಭೆ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಯುಪಿ ಸಂಸದರ ಸಭೆ ನಡೆಯಲಿದೆ ಎನ್ನಲಾಗಿದೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಡಿಸಿಎಂಗಳಾದ ದಿನೇಶ್ ಶರ್ಮಾ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. "ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಬಿಜೆಪಿ ಸಂಸದರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ. ತಮ್ಮ ಕ್ಷೇತ್ರಗಳಲ್ಲಿನ ಜನರನ್ನು ತಲುಪಲು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತರಾಗಿರಲು ಅವರಿಗೆ ಸೂಚನೆ ನೀಡಲಾಗುವುದು. ಕ್ಷೇತ್ರದ ಜನರೊಂದಿಗೆ ಹೆಚ್ಚಿನ ಒಡನಾಟ ಮತ್ತು ಸಮಸ್ಯೆ ಪರಿಹಾರ ಮಾಡಲು ಸೂಚಿಸುವಂತೆ ತಿಳಿಸಲಾಗಿದೆ "ಎಂದು ಮೂಲ ಹೇಳಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ 2022ರಲ್ಲಿ ನಡೆಯಲಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿತ್ತು. 403 ಸದಸ್ಯರ ಉತ್ತರ ಪ್ರದೇಶ ವಿಧಾನಸಭೆಯಲ್ಲಿ, ಪ್ರಮುಖ ಪಕ್ಷಗಳ ಪೈಕಿ ಬಿಜೆಪಿಯಲ್ಲಿ 309 ಶಾಸಕರು, ಎಸ್‌ಪಿ 49, ಬಿಎಸ್‌ಪಿ 18 ಮತ್ತು ಕಾಂಗ್ರೆಸ್ 7 ಮಂದಿ ಇದ್ದಾರೆ.