ಬಹ್ರೇಚ್ (ಉತ್ತರ ಪ್ರದೇಶ): ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್ನ ತಪ್ಪೆ ಸಿಪಾಹ್ನಲ್ಲಿ ನಡೆದಿದೆ. ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಉತ್ತರ ಪ್ರದೇಶ: ಬಸ್-ಟ್ರಕ್ ನಡುವೆ ಅಪಘಾತ, 6 ಸಾವು, 15 ಮಂದಿಗೆ ಗಾಯ - ಉತ್ತರ ಪ್ರದೇಶದ ಬಹ್ರೇಚ್ನ ಅಪಘಾತ
ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಕಾರಣ ಏನು ಎಂಬುದು ಪತ್ತೆಯಾಗಿಲ್ಲ.
uttar-pradesh-bus-truck-accident-6-dead-15-injured
ಟ್ರಕ್ ಡ್ರೈವರ್ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟರ್ ದಿನೇಶ್ ಚಂದ್ರ ತಿಳಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಸರಣಿ ಅಪಘಾತ: ಓರ್ವ ಸಾವು, 9 ಮಂದಿಗೆ ಗಾಯ