ಲಖನೌ (ಉತ್ತರ ಪ್ರದೇಶ): ಕೊರೊನಾ ಹಾವಳಿ ಕಡಿಮೆಯಾದ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಹೇರಲಾಗಿದ್ದ ಕಠಿಣ ಕೋವಿಡ್ ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ.
ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳನ್ನು ಕರ್ಫ್ಯೂ ಮುಕ್ತಗೊಳಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾತ್ರಿ 7ರಿಂದ ಬೆಳಗ್ಗೆ 7ರ ವರೆಗೆ ಇರುವ ನೈಟ್ ಕರ್ಫ್ಯೂ ಮಾತ್ರ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆ ಆರಂಭದಲ್ಲಿ ರಾಜ್ಯದಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದರು. ಸುಮಾರು 200 ಮಂದಿ ಸೋಂಕಿಗೆ ಬಲಿಯಾಗುತ್ತಿದ್ದರು. ಇದೀಗ ಎರಡು ತಿಂಗಳ ಬಳಿಕ ಉತ್ತರ ಪ್ರದೇಶದ ದೈನಂದಿನ ಕೊರೊನಾ ಕೇಸ್ಗಳ ಸಂಖ್ಯೆ ಸಾವರ ಗಡಿಯಿಂದ ಕೆಳಗಿಳಿದಿದೆ. ಕಳೆದ 24 ಗಂಟೆಗಳಲ್ಲಿ 797 ಪ್ರಕರಣಗಳು ವರದಿಯಾಗಿವೆ.
ಇದನ್ನೂ ಓದಿ:ಯೋಗಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರದ ಪ್ರಧಾನಿ.. ಹಿಂದಿರುವ ಕಾರಣವೇನು?
ಒಟ್ಟು 14,000 ಕೇಸ್ಗಳು ಮಾತ್ರ ರಾಜ್ಯದಲ್ಲಿ ಸಕ್ರಿಯವಾಗಿದ್ದು, ಎಲ್ಲಾ 75 ಜಿಲ್ಲೆಗಳಲ್ಲೂ 600ಕ್ಕಿಂತಲೂ ಕಡಿಮೆ ಪ್ರಕರಣಗಳು ಆ್ಯಕ್ಟಿವ್ ಆಗಿವೆ. ಇನ್ನು ಗುಣಮುಖರ ಪ್ರಮಾಣ ಶೇ.97.9 ಕ್ಕೆ ಏರಿಕೆಯಾಗಿದೆ. ಹೀಗಾಗಿ ಕಠಿಣ ಕೋವಿಡ್ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ.