ಫತೇಪುರ್ (ಉತ್ತರ ಪ್ರದೇಶ):ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಮಂಗಳವಾರ ಆಟೋರಿಕ್ಷಾವೊಂದು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಜೆಹನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಚಿಲ್ಲಿ ತಿರುವಿನಲ್ಲಿ ಈ ಘಟನೆ ಜರುಗಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ ಕಾನ್ಪುರದ ಘಟಂಪುರದಿಂದ 11 ಜನರು ಆಟೋ ರಿಕ್ಷಾದಲ್ಲಿ ಜೆಹನಾಬಾದ್‌ಗೆ ಬರುತ್ತಿದ್ದಾಗ ಚಿಲ್ಲಿ ತಿರುವಿನ ಬಳಿ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ:"ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅದೇ ಸಮಯದಲ್ಲಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಕಾನ್ಪುರ ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ" ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಶಂಕರ್ ಮಿಶ್ರಾ ಹೇಳಿದರು.
ಇದನ್ನೂ ಓದಿ:ಎಗ್ರಾ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ, ಸಿಐಡಿ ತನಿಖೆಗೆ ಸಿಎಂ ಮಮತಾ ಆದೇಶ
ಪ್ರಧಾನಿ ನರೇಂದ್ರ ಮೋದಿಯಿಂದ ಸಂತಾಪ: ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಫತೇಪುರ್ ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಅವರ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡಲು ನಿರತವಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ದೇಶದ ವಿರುದ್ಧ ಬೇಹುಗಾರಿಕೆ ಆರೋಪ: ಫ್ರೀಲಾನ್ಸ್ ಪತ್ರಕರ್ತನ ವಿರುದ್ಧ ಸಿಬಿಐ ಕೇಸ್
ಸಂತಾಪ ಸೂಚಿಸಿದ ಸಿಎಂ ಯೋಗಿ ಆದಿತ್ಯನಾಥ್:ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದರು. "ಫತೇಪುರ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯು ಅತ್ಯಂತ ದುಃಖಕರವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ಹಾಗೂ ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ" ಎಂದು ಟ್ವೀಟ್ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಅಪಘಾತದ ನಂತರ ವಾಹನದೊಂದಿಗೆ ಪರಾರಿಯಾಗಿರುವ ಟ್ಯಾಂಕರ್ ಚಾಲಕನನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಮಾಹಿತಿ ನೀಡಿದರು.
ಇದನ್ನೂ ಓದಿ:ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ: ನಾಳೆ ಜಾರ್ಖಂಡ್ ಹೈಕೋರ್ಟ್‌ನಿಂದ ತೀರ್ಪು ಪ್ರಕಟ
ಇದನ್ನೂ ಓದಿ:ತಮಿಳುನಾಡು ನಕಲಿ ಮದ್ಯ ಕೇಸ್: ಇಂದು ಮತ್ತಿಬ್ಬರು ಮೃತ, ಸಾವಿನ ಸಂಖ್ಯೆ 18 ಕ್ಕೆ ಏರಿಕೆ