ಲಖಿಂಪುರ ಖೇರಿ (ಉತ್ತರ ಪ್ರದೇಶ): ಪೊಲೀಸ್ ಸಬ್ ಇನ್ಸ್ಪೆಕ್ಟರ್ವೊಬ್ಬರು ಶಾಲಾ ಬಾಲಕಿಯೊಂದಿಗೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ತಂದೆ ರಾಜಧಾನಿ ಲಖನೌ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೋಗೇಂದ್ರ ಸಿಂಗ್ ಎಂಬುವವರೇ ಬಾಲಕಿಯೊಂದಿಗೆ ಪಲಾಯನ ಮಾಡಿರುವ ಎಸ್ಐ. ಈ ಘಟನೆಯು ಬಾಲಕಿಯ ಕುಟುಂಬಸ್ಥರು, ಸಂಬಂಧಿಕರೂ ಸೇರಿದಂತೆ ಇಡೀ ಪ್ರದೇಶದಲ್ಲಿ ಆಘಾತ ಉಂಟುಮಾಡಿದೆ. ಇಲ್ಲಿನ ಪಲಿಯಾ ಚೌಕಿ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.