ಆಗ್ರಾ(ಉತ್ತರ ಪ್ರದೇಶ):ಮಹಿಳಾ ಪೊಲೀಸ್ ಪೇದೆಯೊಬ್ಬರು ಸಮವಸ್ತ್ರ ಧರಿಸಿ, ಕೈಯಲ್ಲಿ ರಿವಾಲ್ವರ್ ಹಿಡಿದು ಹಿಂದಿ ಸಿನಿಮಾ ಡೈಲಾಗ್ ಹೊಡೆದಿರುವ ವಿಡಿಯೋ ಇನ್ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದು, ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಆಗ್ರಾದಲ್ಲಿನ ಎಂಎಂ ಗೇಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಿಯಾಂಕಾ ಮಿಶ್ರಾ ಈ ರೀತಿಯಾಗಿ ನಡೆದುಕೊಂಡಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದ್ದಾರೆ. ಈಗಾಗಲೇ ಪ್ರಕರಣವನ್ನ ವಿಚಾರಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮುನಿರಾಜ್ ಮಾಹಿತಿ ನೀಡಿದ್ದಾರೆ.