ಕರ್ನಾಟಕ

karnataka

ETV Bharat / bharat

ಉತ್ತರಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್​ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್​ ಯಾದವ್​ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

mulayam-singh-yadav-passed-away
ಉತ್ತರಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್​ ನಿಧನ

By

Published : Oct 10, 2022, 9:46 AM IST

Updated : Oct 10, 2022, 10:11 AM IST

ಗುರುಗ್ರಾಮ್:ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್​ ಯಾದವ್​ ಅವರು ಇಂದು ಬೆಳಗ್ಗೆ 8.16 ಕ್ಕೆ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮುಲಾಯಂ ಸಿಂಗ್​ರನ್ನು ಆಗಸ್ಟ್ 22 ರಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 1 ರ ರಾತ್ರಿ ಮೂತ್ರಕೋಶ ಸೋಂಕಿನಿಂದಾಗಿ ತೀವ್ರ ಅನಾರೋಗ್ಯ ಉಂಟಾಗಿತ್ತು. ತಕ್ಷಣ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಮೇದಾಂತ ಆಸ್ಪತ್ರೆಯ ವೈದ್ಯರ ತಂಡ ತೀವ್ರ ನಿಗಾ ವಹಿಸಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಚಿಕಿತ್ಸೆ ನೀಡುತ್ತಿತ್ತು.

ಕಳೆದೆರಡು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಸಿಎಂ ಮುಲಾಯಂ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಕೋವಿಡ್​ ಸೋಂಕು ತಗುಲಿ ಅದರಿಂದ ಗುಣಮುಖರಾಗಿದ್ದರು. ಬಳಿಕ ಅವರ ಆರೋಗ್ಯ ಕ್ಷೀಣಿಸುತ್ತ ಬಂದಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಮಾಜವಾದಿ ಪಕ್ಷವನ್ನು ಸ್ಥಾಪಿಸಿದ್ದ ಮುಲಾಯಂ ಸಿಂಗ್ ಯಾದವ್, ಮೂರು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕದ ಹೆಚ್​ ಡಿ ದೇವೇಗೌಡ ಅವರು ಪ್ರಧಾನಿಯಾಗಿದ್ದ ವೇಳೆ ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಓದಿ:ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ.. ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಶರತ್ ಮಾಹಿತಿ

Last Updated : Oct 10, 2022, 10:11 AM IST

ABOUT THE AUTHOR

...view details