ಡೆಹ್ರಾಡೂನ್, ಉತ್ತರಾಖಂಡ:ರಾಜಕಾರಣವೇ ಹಾಗೆ.. ಯಾವಾಗ, ಏನಾಗುತ್ತದೆಯೋ ಗೊತ್ತಾಗುವುದಿಲ್ಲ. ಈ ರೀತಿ ಹೇಳೋಕೆ ಕಾರಣ ಉತ್ತರಾಖಂಡದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ.. ಹೌದು ಉತ್ತರಾಖಂಡ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ತಿರಥ್ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಸಿಎಂ ರಾವತ್ ಹೈಕಮಾಂಡ್ ಭೇಟಿಗೆ ತೆರಳಿದ್ದರು. ಇಂದು ಅವರು ತಮ್ಮ ಸಿಎಂ ಸ್ಥಾನ ತ್ಯಜಿಸಬೇಕೆಂದು ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಪಕ್ಷದ ವರಿಷ್ಟರಿಗೆ ರಾಜೀನಾಮೆ ಪತ್ರ ರವಾನಿಸಿದ್ದ ಅವರು, ನಂತರ ಉತ್ತರಾಖಂಡ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.