ಡೆಹ್ರಾಡೂನ್: ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಸಿಎಂ ತಿರಥ್ ಸಿಂಗ್, ನನ್ನ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಯಾವುದೇ ಸಮಸ್ಯೆ ಇಲ್ಲ, ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಐಸೋಲೇಷನ್ಗೆ ಒಳಗಾಗಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹರಿದ ಜೀನ್ಸ್ ಬಗ್ಗೆ ಸಿಎಂ ಟೀಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದವರು ದಯವಿಟ್ಟು ಎಚ್ಚರದಿಂದಿರಿ, ಕೋವಿಡ್ ಪರೀಕ್ಷಗೆ ಒಳಗಾಗಿ. ಪ್ರತಿಯೊಬ್ಬರೂ ಆರೋಗ್ಯದಿಂದರಲಿ ಎಂದು ನಾನು ಬಯಸುತ್ತೇನೆಂದು ಸಿಎಂ ಟ್ವೀಟ್ ಮಾಡಿದ್ದಾರೆ.
ತ್ರಿವೇಂದ್ರ ಸಿಂಗ್ ರಾವತ್ ಬಳಿಕ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತಿರಥ್ ಸಿಂಗ್ ರಾವತ್ ಅವರು ಮಾರ್ಚ್ 10ರಂದು ಪ್ರಮಾಣ ವಚನ ಸ್ವೀಕರಿಸಿದ್ದರು.