ಲಖನೌ (ಉತ್ತರ ಪ್ರದೇಶ):ಉತ್ತರ ಪ್ರದೇಶ ಮಾಜಿ ಡಿಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಸಿರತು ಕ್ಷೇತ್ರದಿಂದ ಸೋತಾಗಿನಿಂದ ಈ ಬಾರಿ ಯೋಗಿ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗುವುದಿಲ್ಲ ಎಂಬ ಊಹಾಪೋಹಗಳಿವೆ. ಆದರೆ, ಚುನಾವಣೆಯಲ್ಲಿ ಸೋತರೂ ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಮುಂದುವರಿಸಲು ಪಕ್ಷದ ಕೇಂದ್ರ ನಾಯಕರ ನಿರ್ಧಾರ ಮಾಡಿದ್ದಾರೆ. ಈ ತೀರ್ಮಾನದ ಬಳಿಕ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಉತ್ತರ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಮುಂದುವರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ಪುಷ್ಕರ್ ಸಿಂಗ್ ಧಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಿದೆ. ಉತ್ತರಾಖಂಡದಲ್ಲಿ ವಿಧಾನ ಪರಿಷತ್ ಕೂಡ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಧಾಮಿ ಬಿಜೆಪಿ ಶಾಸಕರ ಸ್ಥಾನದಲ್ಲಿ ಚುನಾವಣೆಗೆ ಸ್ಪರ್ಧಿಸಿ ಆರು ತಿಂಗಳೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿದೆ. ಚುನಾವಣೆಯಲ್ಲಿ ಸೋತರೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ.
ಇಂತಹ ಪರಿಸ್ಥಿತಿಯಲ್ಲಿ ತಜ್ಞರ ಅಭಿಪ್ರಾಯದ ಪ್ರಕಾರ, ಉತ್ತರಾಖಂಡ ಮಾದರಿಯಲ್ಲಿ ಉತ್ತರಪ್ರದೇಶದಲ್ಲಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಮತ್ತೆ ಉಪಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ.