ಡೆಹರಾಡೂನ್( ಉತ್ತರಾಖಂಡ್):ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಹರಕ್ ಸಿಂಗ್ ಇಂದು ಕಾಂಗ್ರೆಸ್ಗೆ ಮರು ಸೇರ್ಪಡೆಯಾಗಬಹುದು ಎನ್ನಲಾಗಿದೆ.
ಉತ್ತರಾಖಂಡ್ನಲ್ಲಿ ಫೆಬ್ರವರಿ 14 ರಂದು ವಿಧಾನಸಭೆ ಚುನವಾಣೆ ನಡೆಯಲಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ, ರಾವತ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಮೊದಲು ರಾವತ್ ಕಾಂಗ್ರೆಸ್ನಲ್ಲಿದ್ದರು. 2017 ರ ಚುನಾವಣೆಯಲ್ಲಿ ಇವರು ಬಿಜೆಪಿ ಸೇರ್ಪಡೆಗೊಂಡಿದ್ದರು.
ಕೆಲ ದಿನಗಳಿಂದ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಿರುಗಿ ಬಿದ್ದಿದ್ರು. ಅಷ್ಟೇ ಅಲ್ಲ ಬಿಜೆಪಿ ವಿರುದ್ಧ ಸಾರ್ವಜನಿಕವಾಗಿಯೇ ಆಕ್ರೋಶ ಹಾಗೂ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಚುನಾವಣೆಯಲ್ಲಿ ಅವರು ತಮಗೆ ಮತ್ತು ತಮ್ಮ ಸೊಸೆಗೂ ಟಿಕೆಟ್ ನೀಡುವಂತೆ ಕೇಳಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅವರ ಬೇಡಿಕೆ ತಿರಸ್ಕರಿತ್ತು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಪಕ್ಷ ಸ್ಪಷ್ಟ ಪಡಿಸಿತ್ತು.
ಅಷ್ಟೇ ಅಲ್ಲ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ನಿಯಮವನ್ನು ಬಿಜೆಪಿ ಜಾರಿಗೊಳಿಸಿದೆ. ಇದು ರಾವತ್ ಸಿಟ್ಟಿಗೆ ಕಾರಣವಾಗಿದೆ. ಹೀಗಾಗಿಯೇ ಅವರು, ಡೆಹರಾಡೂನ್ನಲ್ಲಿ ನಡೆದ ಅಭ್ಯರ್ಥಿಗಳ ಆಯ್ಕೆ ಸಭೆಗೆ ಗೈರಾಗಿದ್ದರು. ಅಷ್ಟೇ ಏಕೆ ಭಾನುವಾರ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಲ್ಲದೇ ಇಂದು ಕಾಂಗ್ರೆಸ್ ಪಕ್ಷ ಸೇರುವ ಸುಳಿವು ನೀಡಿದ್ದರು. ಇದರಿಂದಾಗಿ ಬಿಜೆಪಿ ಸಚಿವ ಹಾರಕ್ ಸಿಂಗ್ ರಾವತ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಪುರಿ ನಿಶ್ಚಲಾನಂದ ಸರಸ್ವತಿ ಭೇಟಿಯಾದ ಉಮಾ ಭಾರತಿ