ನವದೆಹಲಿ :2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಲು ಕೇವಲ ಮೂರು ದಿನ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ. ಅನಂತ ನಾಗೇಶ್ವರನ್ ಅವರು ನೇಮಕಗೊಂಡಿದ್ದಾರೆ.
ಅನಂತ ನಾಗೇಶ್ವರನ್ ಅವರು ಲೇಖಕ, ಪ್ರಾಧ್ಯಾಪಕ ಹಾಗೂ ಹಣಕಾಸು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದು, ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ಶಾಲೆಗಳು ಮತ್ತು ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಬೋಧನೆ ಮಾಡಿದ್ದಾರೆ.
ಇದನ್ನೂ ಓದಿರಿ:ಭಾರತದ 'ಬ್ರಹ್ಮೋಸ್' ಖರೀದಿಸಿದ ಮೊದಲ ದೇಶ ಫಿಲಿಪ್ಪೀನ್ಸ್.. ₹2,770 ಕೋಟಿ ರೂ. ಒಪ್ಪಂದ
2019 ರಿಂದ 2021ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿ ಅರೆಕಾಲಿಕ ಸದಸ್ಯರೂ ಆಗಿದ್ದ ಅನಂತ ನಾಗೇಶ್ವರನ್, ಕೇಂದ್ರದ ಮುಖ್ಯ ಆರ್ಥಿಕ ತಜ್ಞರಾಗಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ. ಕೃಷ್ಣಮೂರ್ತಿ ಅವರು ಕಳೆದ ಅಕ್ಟೋಬರ್ 8ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
IFMR ಗ್ರಾಜ್ಯುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್ನ ಡೀನ್ ಆಗಿ ಕೆಲಸ ಮಾಡಿರುವ ಇವರು, 2019-21ರವರೆಗೆ ಪಿಎಂ ಆರ್ಥಿಕ ಸಲಹಾ ಮಂಡಳಿಯ ಅರೆಕಾಲಿಕ ಸದಸ್ಯರಾಗಿದ್ದರು. ಅಹಮದಾಬಾದ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಿಂದ ಸ್ನಾತಕೋತ್ತರ ಡಿಪ್ಲೋಮಾ ಪದವಿ ಪಡೆದಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ