ಪುದುಚೇರಿ: ಇಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದು, ರಾಜೀನಾಮೆ ನೀಡಿದ್ದಾರೆ.
ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ರಾಜೀನಾಮೆ; ಅಧಿಕಾರ ಕಳೆದುಕೊಂಡ ಕಾಂಗ್ರೆಸ್ - V. Narayanaswamy
ಲೆಫ್ಟಿನೆಂಟ್ ಗವರ್ನರ್ ತಮಿಳ್ಸಾಯಿ ಸೌಂದರ್ರಾಜನ್ ನಿರ್ದೇಶನದಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚನೆ ನಡೆಸಿದರು. ಈ ವೇಳೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದು, ರಾಜೀನಾಮೆ ನೀಡಿದ್ದಾರೆ.
ವಿ. ನಾರಾಯಣಸ್ವಾಮಿ
ಇಬ್ಬರು ಕಾಂಗ್ರೆಸ್ ಶಾಸಕರಾದ ಎ. ಜಾನ್ ಕುಮಾರ್, ಲಕ್ಷ್ಮಿ ನಾರಾಯಣನ್ ಮತ್ತು ಡಿಎಂಕೆ ಶಾಸಕ ಕೆ. ವೆಂಕಟೇಶನ್ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಬಿಕ್ಕಟ್ಟು ಉದ್ಭವಿಸಿತ್ತು. ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ತಮಿಳ್ಸಾಯಿ ಸೌಂದರರಾಜನ್ ಅವರು ವಿ. ನಾರಾಯಣಸ್ವಾಮಿ ಅವರಿಗೆ ಇಂದು ವಿಶ್ವಾಸಮತ ಯಾಚನೆ ನಡೆಸುವಂತೆ ನಿರ್ದೇಶನ ನೀಡಿದ್ದರು. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ಆಡಳಿತ ಪಕ್ಷ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾಗಿದ್ದು, ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.