ಹೈದರಾಬಾದ್: ಮಹಾಮಾರಿ ಕೊರೊನಾಗೆ ದೇಶಾದ್ಯಂತ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ಸಿಕ್ಕಿದ್ದು, ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಿಗೆ ವ್ಯಾಕ್ಸಿನ್ ನೀಡಲಾಗಿದೆ. ಇದೀಗ ತೆಲಂಗಾಣದಲ್ಲಿ ಇಂದಿನಿಂದ ಭದ್ರತಾ ಸಿಬ್ಬಂದಿ(ಪೊಲೀಸ್ ಇಲಾಖೆ), ಪುರಸಭೆ, ಪಂಚಾಯತ್ ರಾಜ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲು ಚಾಲನೆ ಸಿಗಲಿದೆ.
ಫಲಾನುಭವಿಗಳ ಸಂಖ್ಯೆ 1,88,402 ಆಗಿದ್ದು, ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಗ್ರೀನ್ ಸಿಗ್ನಲ್ ಸಿಗಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಎಟೆಲಾ ರಾಜೇಂದ್ರನ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಅವರು, ಎಲ್ಲ ಆಸ್ಪತ್ರೆಗಳನ್ನ ಕೋವಿಡ್ ಮುಕ್ತ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.