ಪಾಟ್ನಾ(ಬಿಹಾರ): ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಾಗುವ ಕೋವಿಡ್ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ಗೆ 250ರೂ ನೀಡಬೇಕಾಗಿದ್ದು, ಕೇಂದ್ರ ಸರ್ಕಾರವೇ ಇದರ ಬಗ್ಗೆ ಕಳೆದ ಎರಡು ದಿನಗಳ ಹಿಂದೆ ಮಹತ್ವದ ಪ್ರಕಟಣೆ ಹೊರಡಿಸಿದೆ.
ಆದರೆ ಬಿಹಾರದ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ವ್ಯಾಕ್ಸಿನ್ ಉಚಿತವಾಗಿ ಲಭ್ಯವಾಗಲಿದ್ದು, ಇದರ ವೆಚ್ಚ ಬಿಹಾರ ಸರ್ಕಾರ ಭರಿಸಲಿದೆ. ಕೋವಿಡ್ ವ್ಯಾಕ್ಸಿನ್ ಮೊದಲ ಲಸಿಕೆ ಪಡೆದುಕೊಂಡು ಮಾತನಾಡಿದ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್, ಖಂಡಿತವಾಗಿ ಸರ್ಕಾರಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂದಿದ್ದಾರೆ.