ಜಿನೀವಾ:ಒಮಿಕ್ರಾನ್ ವಿರುದ್ಧ ಲಸಿಕೆಗಳು ಪರಿಣಾಮಕಾರಿಯಾಗಿವೆ. ಏಕೆಂದರೆ ಅನೇಕ ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸಹ, ರೋಗದ ತೀವ್ರತೆ ಏರಿಕೆಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.
ಬುಧವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನಿರೀಕ್ಷೆಯಂತೆ, ಒಮಿಕ್ರಾನ್ ವಿರುದ್ಧ ಟಿ ಸೆಲ್ ರೋಗ ನಿರೋಧಕ ಶಕ್ತಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದು ಗಂಭೀರ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ. ನೀವು ಲಸಿಕೆ ಹಾಕದಿದ್ದರೆ, ದಯವಿಟ್ಟು ಹಾಕಿಸಿ ಎಂದು ವಿಶ್ವದ ದೇಶಗಳಿಗೆ ಅವರು ಮನವಿ ಮಾಡಿದ್ದಾರೆ.
ಪ್ರಪಂಚದಾದ್ಯಂತ ಒಮಿಕ್ರಾನ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಲಸಿಕೆ ತೆಗೆದುಕೊಂಡ ಮತ್ತು ಇಲ್ಲಿಯವರೆಗೆ ಕೊರೊನಾದಿಂದ ಬದುಕುಳಿದ ಜನರಿಗೆ ಸೋಂಕು ತಗುಲುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಲಸಿಕೆಗಳು ಪರಿಣಾಮಕಾರಿಯಾಗಿವೆ ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.