ಕತ್ರಾ, ಜಮ್ಮು ಕಾಶ್ಮೀರ: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ ಉಂಟಾಗಿ ಸಾಕಷ್ಟು ಸಾವು-ನೋವು ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ತ್ರಿಸದಸ್ಯ ಆಯೋಗವನ್ನು ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಆಯೋಗವನ್ನು ರಚನೆ ಮಾಡಿದ್ದು, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ತನಿಖಾ ಆಯೋಗದ ನೇತೃತ್ವ ವಹಿಸಿಕೊಂಡಿದ್ದಾರೆ.
ಕಾಲ್ತುಳಿತಕ್ಕೆ ಕಾರಣವೇನು ಎಂಬ ಬಗ್ಗೆ ಅತ್ಯಂತ ಮುಖ್ಯವಾಗಿ ಈ ತನಿಖಾ ಆಯೋಗ ವರದಿ ನೀಡಲಿದೆ ಎಂದು ಜಮ್ಮು ಕಾಶ್ಮೀರ ಸರ್ಕಾರದ ಪರವಾಗಿ ಜನರಲ್ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ದ್ವಿವೇದಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಇನ್ನು ಕಾಲ್ತುಳಿತ ಪ್ರಕರಣದಲ್ಲಿ ಒಟ್ಟು 12 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈಗಾಗಲೇ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಜಮ್ಮು ಕಾಶ್ಮೀರ ಸರ್ಕಾರ ಘೋಷಿಸಿದೆ.
ಇದನ್ನೂ ಓದಿ:ಹೊಸ ವರ್ಷದಂದು ಪೊಲೀಸರ ಮುಂದೆ ಶರಣಾದ 44 ನಕ್ಸಲರು