ನವದೆಹಲಿ:ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ.
ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಿವೆ. ಇದೀಗ ಐದನೇ ರೈಲನ್ನು ದಕ್ಷಿಣ ಭಾರತದ ಪ್ರಮುಖ ನಗರಗಳಾದ ಚೆನ್ನೈ, ಬೆಂಗಳೂರು ಹಾಗೂ ಮೈಸೂರು ಮಧ್ಯೆ ಪ್ರಾರಂಭಿಸಲು ಯೋಜಿಸಲಾಗಿದೆ. ಇದೇ ನವೆಂಬರ್ 10ರಂದು ಈ ಮೂರು ನಗರಗಳನ್ನು ಸಂದಿಸುವ ರೈಲು ಆರಂಭವಾಗುವ ನಿರೀಕ್ಷೆ ಇದೆ.