ಹೈದರಾಬಾದ್, ತೆಲಂಗಾಣ:ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ (6E897) ತುರ್ತು ಭೂಸ್ಪರ್ಶ ಮಾಡಿದೆ. ಮಂಗಳವಾರ ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ತಿಳಿದುಬಂದಿದೆ. ವಿಮಾನದಲ್ಲಿ 137 ಮಂದಿ ಪ್ರಯಾಣಿಸುತ್ತಿದ್ದರು.
ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೊರಡಿಸಿದ ಹೇಳಿಕೆ ಪ್ರಕಾರ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನ ತುರ್ತು ಭೂಸ್ಪರ್ಶದ ಹಿಂದೆ ತಾಂತ್ರಿಕ ದೋಷವಿದೆ ಎಂದು ಹೇಳಲಾಗುತ್ತಿದೆ. ವಿಮಾನದಲ್ಲಿ ಯಾವ ರೀತಿಯ ತಾಂತ್ರಿಕ ದೋಷ ಕಂಡುಬಂದಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಓದಿ:ಆಸ್ಕರ್: ಬೊಮ್ಮನ್, ಬೆಳ್ಳಿಗೆ ಇಂಡಿಗೋ ವಿಮಾನದಲ್ಲಿ ವಿಶೇಷ ಗೌರವ.. ಪ್ರಯಾಣಿಕರಿಂದ ಕರತಾಡನ
ಬೆಂಗಳೂರಿನಲ್ಲಿ ವಿಮಾನ ತುರ್ತು ಭೂ ಸ್ಪರ್ಶ:200 ಪ್ರಯಾಣಿಕರನ್ನು ಹೊತ್ತು ದುಬೈಗೆ ಹೊರಟಿದ್ದ ಎತಿಹಾದ್ ಏರ್ ವೇಸ್ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಿಸಿದೆ.
ಏಪ್ರಿಲ್ 2 ರಾತ್ರಿ 9.07 ಸಮಯದಲ್ಲಿ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಿಂದ EY 237 ಸಂಖ್ಯೆಯ ಎತಿಹಾದ್ ವಿಮಾನ ಅಬು ಧಾಬಿಗೆ ಸಂಚರಿಸುತ್ತಿತ್ತು. ಆದರೆ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಕ್ಯಾಬಿನ್ನಲ್ಲಿ ಒತ್ತಡ ಕಡಿಮೆಯಾಗಿದ್ದು ತುರ್ತು ಭೂಸ್ಪರ್ಶ ಮಾಡಿದೆ. ಘಟನೆಯಿಂದ ಪ್ರಯಾಣಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ವಿಮಾನ 4 ಗಂಟೆ ತಡವಾಗಿ ಮರು ಪ್ರಯಾಣ ಬೆಳೆಸಿತು ಎಂದು ತಿಳಿದು ಬಂದಿದೆ.