ಕರ್ನಾಟಕ

karnataka

ETV Bharat / bharat

ವರವರರಾವ್​ರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸುವಂತೆ ಬಾಂಬೆ ಕೋರ್ಟ್​ ಆದೇಶ - Elgar Parishad-Maoist links case

ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರನ್ನು, ತಾಲೋಜ ಜೈಲಿನಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ಬಾಂಬೆ ಹೈಕೋರ್ಟ್​ ಆದೇಶ ನೀಡಿದೆ.

Varavara Rao
ವರವರ ರಾವ್

By

Published : Nov 19, 2020, 12:10 PM IST

ಮುಂಬೈ:ಎಲ್ಗರ್ ಪರಿಷತ್ - ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರರಾವ್ ಅವರನ್ನು, ರಾಯಗಢ ಜಿಲ್ಲೆಯ ತಾಲೋಜಾ ಜೈಲಿನಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ನಿನ್ನೆ ತಡರಾತ್ರಿ 80 ವರ್ಷದ ರಾವ್​ ಅವರನ್ನು 15 ದಿನಗಳ ಕಾಲ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಅವರಿಗೆ ಚಿಕಿತ್ಸೆ ಅಗತ್ಯವಿದ್ದು, ಆದ್ದರಿಂದ ಎರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಿಸಲು ನ್ಯಾಯಮೂರ್ತಿಗಳಾದ ಎಸ್. ಎಸ್. ಶಿಂಧೆ ಮತ್ತು ಮಾಧವ್ ಜಮ್ದಾರ್ ಅವರಿದ್ದ ನ್ಯಾಯಪೀಠ ಸೂಚನೆ ನೀಡಿದೆ.

ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬಾರದು. ಮತ್ತು ಕುಟುಂಬಸ್ಥರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಅವಕಾಶ ನೀಡಬೇಕು ಎಂದು ಕೋರ್ಟ್​ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯು ಡಿಸೆಂಬರ್ 3 ರಂದು ನಡೆಯಲಿದೆ.

ABOUT THE AUTHOR

...view details