ಪಿಲಿಭಿತ್(ಉತ್ತರಪ್ರದೇಶ) : ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ವರುಣ್ ಗಾಂಧಿ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವಿಟರ್ ಪೋಸ್ಟ್‌ನಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದು, ಕಳೆದ 8 ವರ್ಷಗಳಲ್ಲಿ 22 ಕೋಟಿ ಯುವಕರು ಕೇಂದ್ರ ಇಲಾಖೆಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 7 ಲಕ್ಷ ಜನರು ಮಾತ್ರ ಉದ್ಯೋಗ ಪಡೆದಿದ್ದಾರೆ ಎಂದು ಮೋದಿ ಸರ್ಕಾರವನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಸುಮಾರು 1 ಕೋಟಿ ಮಂಜೂರಾದ ಹುದ್ದೆಗಳು ಖಾಲಿ ಇವೆ ಎಂದರೆ ಈ ಪರಿಸ್ಥಿತಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ. ಇವರು ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಸರ್ಕಾರದ ವಿರುದ್ಧ ಕಠಿಣ ಹೇಳಿಕೆಗಳನ್ನು ಮಾಡುತ್ತಲೇ ಇದ್ದಾರೆ. ಗಂಗಾ ನದಿ ಸ್ವಚ್ಛತೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದರು ಎಂದು ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದು ಪಕ್ಷದ ಹೈಕಮಾಂಡ್ ಕಣ್ಣನ್ನು ಕೆಂಪಗೆ ಮಾಡಿದ್ದಾರೆ.