ನವದೆಹಲಿ:ಜನರೇ ಸ್ವಂತವಾಗಿ ಎಲ್ಲವನ್ನೂ ತಮ್ಮಿಚ್ಚೆಯಂತೆ ಮಾಡುವುದಾದರೆ ಸರ್ಕಾರದ ಅಗತ್ಯವೇನಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತೊಮ್ಮೆ ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಟೆರೈ ಪ್ರದೇಶದಲ್ಲಿ ಪ್ರವಾಹದ ಉಂಟಾಗಿ ಸಾಕಷ್ಟು ಹಾನಿ ಸಂಭವಿಸಿದ್ದು, ಜನರು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ, ಯುಪಿ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಯಾವುದೇ ಸೌಲಭ್ಯ ಕಲ್ಪಿಸುವ ಗೋಜಿಗೆ ಹೋಗಿಲ್ಲ. ಇಂತಹ ಕಠಿಣ ಸಂಭರ್ದದಲ್ಲೂ ಜನರು ತಮಗೆ ತಾವೇ ಸಹಾಯ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವ ಸರ್ಕಾರದ ಅಗತ್ಯವೇನು ಎಂದು ಪ್ರಶ್ನಿಸಿದರು.
ಟೆರೈನ ಬಹುತೇಕ ಭಾಗ ಪ್ರವಾಹದ ಹೊಡತಕ್ಕೆ ಒಳಗಾಗಿದೆ. ಈ ವಿಪತ್ತನಿಂದ ಜನರು ಹೊರ ಬರುವವರೆಗೂ ಯಾವುದೇ ಕುಟುಂಬವು ಹಸಿವಿನಿಂದ ನರಳಬಾರದು ಎಂಬ ಕಾರಣಕ್ಕೆ ಪಡಿತರ ವಿತರಣೆ ಮಾಡಲಾಗಿದೆ. ಒಬ್ಬ ಸಾಮಾನ್ಯ ಮನುಷ್ಯನಿಗೆ ಈ ವ್ಯವಸ್ಥೆಯು ಹೆಚ್ಚು ಅಗತ್ಯವಿರುವಾಗ, ತನಗೆ ಬೇಕಾದನ್ನು ತಾನೇ ಮಾಡಿಕೊಳ್ಳಲು ಆತನನ್ನು ಬಿಡುವುದು ನೋವಿನ ಸಂಗತಿ ಎಂದು ಹರಿಹಾಯ್ದಿದ್ದಾರೆ.
ಈ ಹಿಂದೆ ವರುಣ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು, ಕಬ್ಬಿನ ಬೆಂಬಲ ಬೆಲೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿದ್ದರು. ಬಳಿಕ ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ರಾಜ್ಯದ ಪ್ರವಾಹ ಸಂತ್ರಸ್ತರ ಸಂಕಷ್ಟದ ಬಗ್ಗೆ ಯೋಗಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗುಡುಗಿದ್ದಾರೆ.
ಇದನ್ನೂ ಓದಿ:ತಿಮ್ಮಪ್ಪನ ವಿಶೇಷ ದರ್ಶನಕ್ಕಾಗಿ 300 ರೂ. ಆನ್‌ಲೈನ್ ಟಿಕೆಟ್ ಬಿಡುಗಡೆ ಮಾಡಿದ ಟಿಟಿಡಿ