ಲಖನೌ :ಭಾರತೀಯ ಜನತಾ ಪಕ್ಷದ ಪಿಲಿಭಿತ್ ಸಂಸದ ವರುಣ್ ಗಾಂಧಿ ಮತ್ತೊಮ್ಮೆ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ. ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವರುಣ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಕಠಿಣ ಕ್ರಮವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.
ದೇಶದ ದೊಡ್ಡ ಕೈಗಾರಿಕೋದ್ಯಮಿಗಳ ಉದಾಹರಣೆಯನ್ನು ನೀಡಿರುವ ಅವರು, ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. "ವಿಜಯ್ ಮಲ್ಯ- 9000 ಕೋಟಿ, ನೀರವ್ ಮೋದಿ- 14,000 ಕೋಟಿ, ರಿಷಿ ಅಗರ್ವಾಲ್ - 23,000 ಕೋಟಿ. ಇಂದು ದೇಶದಲ್ಲಿ ಸಾಲದ ಹೊರೆಯಿಂದ ದಿನಕ್ಕೆ 14 ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಅಂತಹ ಸಂಪತ್ತು ಹೊಂದಿದವರು ವೈಭವದ ಜೀವನವನ್ನು ಮಾಡುತ್ತಿದ್ದಾರೆ. ಈ ಮೆಗಾ-ಭ್ರಷ್ಟ ವ್ಯವಸ್ಥೆಯ ಮೇಲೆ ಸರ್ಕಾರ ಬಲವಾದ ಕ್ರಮ ತೆಗೆದುಕೊಳ್ಳುವ ನಿರೀಕ್ಷೆಯಿದೆ" ಟ್ವೀಟ್ನಲ್ಲಿ ಹೇಳಿದ್ದಾರೆ.