ನವದೆಹಲಿ:ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಮಾಜಿ ಮುಖ್ಯಸ್ಥ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಆಕಾರ್ ಪಟೇಲ್ ವಿರುದ್ಧ ಸಿಬಿಐ ಹೊರಡಿಸಿರುವ ಲುಕ್‌ಔಟ್ ನೋಟಿಸ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪವನ್ ಕುಮಾರ್ ಇಂದು ಸಂಜೆ 4 ಗಂಟೆಗೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಅಮೆರಿಕಕ್ಕೆ ಹೊರಡಲು ಸಿದ್ಧವಾಗಿದ್ದ ಆಕಾರ್ ಪಟೇಲ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬಿಐ ತಡೆಯಲಾಗಿತ್ತು. ಲುಕ್‌ಔಟ್ ನೋಟಿಸ್ ಮೂಲಕ ಅವರ ಪ್ರಯಾಣಕ್ಕೆ ತಡೆ ಒಡ್ಡಲಾಗಿತ್ತು. ಸಿಬಿಐ ತಮ್ಮ ಹೊರಡಿಸಿರುವ ಲುಕ್‌ಔಟ್ ನೋಟಿಸ್ ವಿರುದ್ಧ ಆಕಾರ್ ಪಟೇಲ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯಲ್ಲಿ ಆಕಾರ್ ಪಟೇಲ್ ಅವರು ಮೇ 30ರವರೆಗೆ ಅಮೆರಿಕಕ್ಕೆ ಪ್ರಯಾಣಿಸಲು ಅನುಮತಿ ಕೋರಿದ್ದು, ಅಮೆರಿಕದಲ್ಲಿ ಕೆಲವು ಉಪನ್ಯಾಸಗಳನ್ನು ನೀಡಬೇಕಿದೆ ಎಂದು ಉಲ್ಲೇಖಿಸಿದ್ದಾರೆ.