ಮುಂಬೈ (ಮಹಾರಾಷ್ಟ್ರ) : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರಾದ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಸಿನಿಮಾದಲ್ಲಿ ನಟಿಸದಿರಲು ನಿರ್ಧರಿಸಿದ ಟಾಲಿವುಡ್ ಹಾಸ್ಯ ನಟ ರಾಹುಲ್ ರಾಮಕೃಷ್ಣ
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲತಾ ಮಂಗೇಶ್ಕರ್ ಅವರ ಆರೋಗ್ಯದ ಮೇಲೆ ನಾನು ನಿಗಾ ವಹಿಸಿದ್ದೇನೆ ಎಂದು ಡಾ.ಪ್ರತೀತ್ ಸಮ್ದಾನಿ ಹೇಳಿದ್ದಾರೆ. ಶನಿವಾರವಷ್ಟೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ವೈದ್ಯರು ಲತಾ ಮಂಗೇಶ್ಕರ್ ಅವರ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲಗಳಿಗೆ ಕಿವಿಗೊಡಬೇಡಿ, ಅವರ ಆರೋಗ್ಯದಲ್ಲಿ ಸ್ಥಿರತೆ ಇದ್ದು, ಐಸಿಯುನಲ್ಲೇ ಚಿಕಿತ್ಸೆ ಮುಂದುವರೆದಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದರು.
ಜನವರಿ 9ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸುಧಾರಿಸಿದ ಹಿನ್ನೆಲೆ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ಅನ್ನು ಹಿಂದಿನ ವಾರವಷ್ಟೇ ತೆಗೆದು ಹಾಕಲಾಗಿತ್ತು.
ಇದನ್ನೂ ಓದಿ:ಗೊಂದಲಗಳಿಗೆ ಕಿವಿಗೊಡಬೇಡಿ : ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಸ್ಥಿರ ಎಂದ ಆಸ್ಪತ್ರೆ ವೈದ್ಯರು