ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ.
ಹೈದರಾಬಾದ್‌ನಲ್ಲಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಇಂದು ಕೋವಿಡ್-19 ಪಾಸಿಟಿವ್ ಆಗಿದ್ದು, ಒಂದು ವಾರ ಅವರು ಸ್ವಯಂ ಆಗಿ ಐಸೋಲೇಷನ್ನಲ್ಲಿ ಇರಲಿದ್ದಾರೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಪಡುವಂತೆ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಭದ್ರತಾ ವಿಭಾಗ, ಸಿಐಎಸ್ಒ ಮುಖ್ಯಸ್ಥರನ್ನು ಕೆಲಸದಿಂದ ತೆಗೆದು ಹಾಕಿದ ಟ್ವಿಟರ್ ಸಿಇಒ
ಕೊರೊನಾ ಹಿನ್ನೆಲೆ ಬುಧವಾರ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ.
ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 3,33,533 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಿನ್ನೆಗೆ ಹೋಲಿಸಿದ್ರೆ, ಸುಮಾರು 4,000 ಪ್ರಕರಣಗಳು ಕಡಿಮೆಯಾಗಿವೆ. 525 ಜನ ಸೋಂಕಿಗೆ ಬಲಿಯಾಗಿದ್ದು, 2,59,168 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205 ಇದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ