ನವದೆಹಲಿ:2020ರ ಟೋಕಿಯೋ ಪ್ಯಾರಾಲಿಂಪಿಕ್ಸ್ನ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 9ರಂದು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ್ದರು. ಅದರ ವಿಡಿಯೋ ಈಗ ಹೊರಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಅಲ್ಲದೇ ನೆಟ್ಟಿಗರ ಮೆಚ್ಚುಗೆಗೂ ಪಾತ್ರವಾಗಿದೆ.
ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಆತಿಥ್ಯ ಈ ಬಾರಿ ಪ್ಯಾರಾ-ಅಥ್ಲೀಟ್‌ಗಳು ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು ಕಂಚು ಸೇರಿದಂತೆ 19 ಪದಕಗಳನ್ನು ಭಾರತಕ್ಕೆ ತಂದು ಕೊಟ್ಟು ಇತಿಹಾಸ ಸೃಷ್ಟಿಸಿದ್ದಾರೆ. ಈ ಮೂಲಕ ಭಾರತವು ಪ್ಯಾರಾಲಿಂಪಿಕ್ಸ್ ಪದಕಗಳ ಪಟ್ಟಿಯಲ್ಲಿ 24ನೇ ಸ್ಥಾನ ಪಡೆಯಿತು.
ಇದನ್ನೂ ಓದಿ:ಫೋಟೋ ನೋಡಿ: ಪ್ಯಾರಾಲಿಂಪಿಕ್ಸ್ನಲ್ಲಿ ಸಾಧನೆಗೈದ ಸಾಧಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಟೋಕಿಯೋ ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಪದಕ ಗೆದ್ದು ಕೊಟ್ಟ ಕ್ರೀಡಾಪಟುಗಳನ್ನು ಕೂಡ ಪ್ರಧಾನಿ ಭೇಟಿ ಮಾಡಿದ್ದರು. ಹಾಗೆಯೇ ಟೋಕಿಯೊದಿಂದ ಮರಳಿದ ಪ್ಯಾರಾಲಿಂಪಿಕ್ಸ್ ಪದಕ ವಿಜೇತರು ಹಾಗೂ ಕೋಚ್ಗಳನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡ ಪಿಎಂ ಮೋದಿ, ಅಲ್ಲಿ ಎಲ್ಲರಿಗೂ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು.
ಅವರೊಂದಿಗೆ ಹರಟೆ ಹೊಡೆದು, ಕೆಲ ವಿಷಯಗಳ ಕುರಿತು ಸಂವಾದ ನಡೆಸಿದ್ದಾರೆ. ಇದೇ ವೇಳೆ ಪದಕ ವಿಜೇತ ಕ್ರೀಡಾಪಟುಗಳು ತಮ್ಮ ಆಟೋಗ್ರಾಫ್ ಇರುವ ಬಿಳಿ ಬಣ್ಣದ ಶಾಲನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ.