ರಾಯ್ಪುರ(ಛತ್ತೀಸ್ಗಢ):ಆಕ್ಟಿವಾಗೆ ಟಿಪ್ಪರ್ಗೆ ಡಿಕ್ಕಿ ಹೊಡೆದು ಯುವತಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯ್ಪುರದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದೆ.
ಘಟನೆಯು ತೆಲಿಬಂಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರನ್ನು ರಾಜನಂದಗಾಂವ್ ನಿವಾಸಿ ಆಕೃತಿ ಮಿಶ್ರಾ ಎಂದು ಗುರುತಿಸಲಾಗಿದೆ. ಇದೀಗ ಅಪಘಾತದ ವಿಡಿಯೋ ವೈರಲ್ ಆಗಿದ್ದು, ಸ್ಕೂಟಿಯಲ್ಲಿ ನಿಂತಿದ್ದ ಯುವತಿಯನ್ನು ನೋಡದೆ ಚಾಲಕ ಟಿಪ್ಪರ್ಅನ್ನು ತಿರುಗಿಸಿದ್ದಾನೆ. ಈ ವೇಳೆ ಟಿಪ್ಪರ್ ಆಕೆಯ ಮೇಲೆ ಚಲಿಸಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.