ಮುಂಬೈ (ಮಹಾರಾಷ್ಟ್ರ):ಜೈಪುರ ಎಕ್ಸ್‌ಪ್ರೆಸ್‌ನಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ದಾಳಿ ಸಾಕಷ್ಟು ಕೋಲಾಹಲ ಸೃಷ್ಟಿಸಿದೆ. ರಾಜಸ್ಥಾನದ ಜೈಪುರದಿಂದ ಮುಂಬೈಗೆ ಹೋಗುತ್ತಿದ್ದ ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್ ಮನಬಂದಂತೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಕೊಂದಿದ್ದಾನೆ. ಪಾಲ್ಘರ್ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ಶಂಕಿತ ವ್ಯಕ್ತಿಯ ವರ್ತನೆಯ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಈ ಘಟನೆ ಕುರಿತು ವಿಡಿಯೋವೊಂದು ವೈರಲ್ ಸಹ ಆಗ್ತಿದೆ.
ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ರೈಲ್ವೇ ರಕ್ಷಣಾ ಪಡೆಯ ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎಎಸ್‌ಐ ಟಿಕಾರಾಂ ಮೀನಾ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ. ನಂತರ ಮತ್ತೊಂದು ಬೋಗಿಯಲ್ಲಿದ್ದ ಮೂವರು ಪ್ರಯಾಣಿಕರ ಮೇಲೆ ಗುಂಡು ಹಾರಿಸಲಾಗಿದ್ದು, ಅವರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಬಳಿಕ ಮುಂದಿನ ನಿಲ್ದಾಣದಲ್ಲಿ ರೈಲು ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ.
ಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ (ಪಶ್ಚಿಮ ರೈಲ್ವೆ) ಪ್ರವೀಣ್ ಸಿನ್ಹಾ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದರು. ಅವನದು ಅಲ್ಪ ಕೋಪ. ಸುಲಭವಾಗಿ ಕೋಪಗೊಳ್ಳುವ ಪ್ರವೃತ್ತಿಯನ್ನು ಹೊಂದಿದ್ದಾನೆ. ಆ ಸಮಯದಲ್ಲಿ ದೊಡ್ಡ ಜಗಳ ಇರಲಿಲ್ಲ. ಆದರೆ ಕೋಪದ ಕ್ಷಣದಲ್ಲಿ ಅವನು ತನ್ನ ಹಿರಿಯ ಅಧಿಕಾರಿಯನ್ನು ಹೊಡೆದು ಹಾಕಿದ್ದಾರೆ. ನಂತರ ಕಾಣಿಸಿಕೊಂಡವರಿಗೆ ಗುಂಡು ಹಾರಿಸುತ್ತಲೇ ಇದ್ದ ಎಂದು ಅಧಿಕಾರಿ ಹೇಳಿಕೆ ನೀಡಿದ್ದಾರೆ.
ಚೇತನ್ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಮೀತೈ ಗ್ರಾಮದ ನಿವಾಸಿ. ಈ ಘಟನೆಯಲ್ಲಿ ತಮ್ಮ ಪ್ರಾಣ ಕಳೆದುಕೊಂಡ ಎಎಸ್‌ಐ ಅಧಿಕಾರಿ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಶ್ಯಾಮಪುರ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅವರು 2025 ರಲ್ಲಿ ನಿವೃತ್ತರಾಗಲಿದ್ದರು. ಎಎಸ್‌ಐ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ. ಮೃತ ಮೂವರು ಪ್ರಯಾಣಿಕರಿಗೆ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲಿನಲ್ಲಿ ಭದ್ರತೆಗಾಗಿ ಆರ್‌ಪಿಎಫ್ ಸಿಬ್ಬಂದಿಗೆ ಎಸ್ಕಾರ್ಟ್ ಡ್ಯೂಟಿ ನೀಡಲಾಗುತ್ತದೆ. ಎಎಸ್‌ಐ ಅವರನ್ನು ಜೈಪುರದಿಂದ ಮುಂಬೈಗೆ ಹೋಗುವ ರೈಲಿನಲ್ಲಿ ಎಸ್ಕಾರ್ಟ್ ಇನ್‌ಚಾರ್ಜ್ ಆಗಿ ನಿಯೋಜಿಸಲಾಗಿತ್ತು ಮತ್ತು ಕಾನ್‌ಸ್ಟೆಬಲ್ ಚೇತನ್ ಸಹ ಬೆಂಗಾವಲು ಕರ್ತವ್ಯದಲ್ಲಿದ್ದರು. ಜೈಪುರ ರೈಲಿನಲ್ಲಿ ಎಎಸ್‌ಐ, ಚೇತನ್ ಸೇರಿದಂತೆ ನಾಲ್ವರು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಗುಜರಾತ್‌ನ ಸೂರತ್‌ನಲ್ಲಿ ರೈಲು ಹತ್ತಿದರು. ಈ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಕುಟುಂಬ ಸದಸ್ಯರಿಗೆ ಪರಿಹಾರ ಘೋಷಣೆ: ಚಲಿಸುತ್ತಿದ್ದ ರೈಲಿನಲ್ಲಿ ಯಾವುದೋ ವಿಚಾರಕ್ಕೆ ಎಎಸ್‌ಐ ಮತ್ತು ಚೇತನ್ ನಡುವೆ ಜಗಳ ನಡೆದಿದೆ. ಬಳಿಕ ಚೇತನ್ ಸರ್ವೀಸ್ ಗನ್ನಿಂದ ಗುಂಡು ಹಾರಿಸಿದ್ದಾರೆ. ಇದರಿಂದ ಎಎಸ್‌ಐ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಿಗೆ ಮಗನೊಬ್ಬನಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಮಗಳನ್ನು ವಿವಾಹ ಮಾಡಿಕೊಟ್ಟಿದ್ದಾರೆ. ಎಎಸ್‌ಐ ಅವರು 6 ತಿಂಗಳ ನಂತರ ನಿವೃತ್ತಿ ಹೊಂದಲಿದ್ದರು.