ಜಲೌನ್ (ಉತ್ತರ ಪ್ರದೇಶ): ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಲು ಬಂದ ಪೊಲೀಸ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದ್ದು, ಅಕ್ರಮ ಮದ್ಯದ ವಿರುದ್ಧ ಅಭಿಯಾನ ನಡೆಸಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಲ್ಪಿ ಕೋತ್ವಾಲಿ ಪ್ರದೇಶದ ಶಾಜಾಪುರಕ್ಕೆ ಪೊಲೀಸರು ಬಂದಿದ್ದಾರೆ. ಆದರೆ ಗ್ರಾಮಸ್ಥರು ಸುತ್ತುವರೆದು ಓರ್ವ ಪೊಲೀಸ್ ಸಿಬ್ಬಂದಿಯನ್ನೇ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.