ಸಿಂಗ್ರೌಲಿ(ಮಧ್ಯಪ್ರದೇಶ): ಇಲ್ಲಿನ ಮಾರುಕಟ್ಟೆವೊಂದರಲ್ಲಿ ಪೊಲೀಸರು ಹಾಗೂ ವ್ಯಾಪಾರಸ್ಥರ ನಡುವೆ ಮಾರಾಮಾರಿ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಕೊಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತರಕಾರಿ ಮಾರುಕಟ್ಟೆಯಲ್ಲಿ ಈ ವಿವಾದ ನಡೆದಿದೆ. ತರಕಾರಿ ಅಂಗಡಿ ಸ್ಥಳಾಂತರ ಮಾಡುವಂತೆ ಪೊಲೀಸರು ವ್ಯಾಪಾರಿಗಳಿಗೆ ಹೇಳಲು ಮುಂದಾಗುತ್ತಿದ್ದಂತೆ ವಾಗ್ವಾದ ನಡೆದಿದ್ದು, ಈ ವೇಳೆ ಆಕ್ರೋಶಗೊಂಡ ಮಾರಾಟಗಾರರು ಕಲ್ಲು ಎಸೆದಿದ್ದಾರೆ. ಇದರಿಂದ ಖಾಕಿ ಪಡೆ ಅಲ್ಲಿಂದ ಕಾಲ್ಕಿತ್ತಿದೆ.