ನವದೆಹಲಿ:ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ವಿನಯ್ಕುಮಾರ್ ಸಕ್ಸೇನಾ ಅವರನ್ನು ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅನಿಲ್ ಬೈಜಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ವಿನಯ್ ಕುಮಾರ್ ಸಕ್ಸೇನಾ ಅವರನ್ನು ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೆಹಲಿ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ಕುಮಾರ್ ಸಕ್ಸೇನಾ ನೇಮಕ - ದೆಹಲಿ ನೂತನ ಲೆಫ್ಟಿನೆಂಟ್ ಗವರ್ನರ್ ನೇಮಕ
ಅನಿಲ್ ಬೈಜಾಲ್ ಅವರಿಂದ ತೆರವಾದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ವಿನಯ್ಕುಮಾರ್ ಸಕ್ಸೇನಾ ಅವರನ್ನು ರಾಷ್ಟ್ರಪತಿ ಭವನ ನೇಮಕ ಮಾಡಿದೆ.
ದೆಹಲಿ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ಕುಮಾರ್ ಸಕ್ಸೇನಾ ನೇಮಕ
5 ವರ್ಷ 4 ತಿಂಗಳ ಕಾಲ ದೆಹಲಿಯ ಎಲ್‌ಜಿಯಾಗಿ ಸೇವೆ ಸಲ್ಲಿಸಿದ್ದ ಬೈಜಾಲ್ ಅವರು ಕಳೆದ ವಾರವಷ್ಟೇ ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ದೆಹಲಿ ಲೆಫ್ಟಿನೆಂಟ್ ಹುದ್ದೆಯನ್ನು ವಿನಯ್ಕುಮಾರ್ ಸಕ್ಸೇನಾ ತುಂಬಿದ್ದಾರೆ. ಸಕ್ಸೇನಾ ಅವರು 2015 ರಿಂದ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ದರು.