ಪಿಲಿಭಿತ್ (ಉತ್ತರ ಪ್ರದೇಶ): 2012ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಎರಡು ಪ್ರಕರಣಗಳಲ್ಲಿ ಉತ್ತರ ಪ್ರದೇಶ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ದೋಷಿ ಎಂದು ಘೋಷಿಸಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಮೂರನೇ ಪ್ರಕರಣದಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದೆ.
ಸಂಸದ-ಶಾಸಕರ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಪ್ರಿಯಾಂಕಾ ರಾಣಿ ಅವರು ಪ್ರತಿ ಪ್ರಕರಣದಲ್ಲಿ ಕಬ್ಬು ಮತ್ತು ಸಕ್ಕರೆ ಖಾತೆ ರಾಜ್ಯ ಸಚಿವರಿಗೆ 2,000 ರೂ. ದಂಡ ಕೂಡ ವಿಧಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗಿದ್ದ ಗಂಗ್ವಾರ್ ಅವರನ್ನು ಶಿಕ್ಷೆಯ ನಂತರ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆದಾಗ್ಯೂ, ನಂತರ ಅವರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಅದನ್ನು ನ್ಯಾಯಾಲಯ ಪರಿಗಣಿಸಿದೆ.