ಕರ್ನಾಟಕ

karnataka

ETV Bharat / bharat

Maharashtra Violence: ಮಹಾರಾಷ್ಟ್ರದಲ್ಲಿ ಕೆಲ ಸಂಘಟನೆಗಳು ಕರೆ ನೀಡಿದ್ದ ಬಂದ್​ನಲ್ಲಿ ಹಿಂಸಾಚಾರ..

ತ್ರಿಪುರಾದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯವನ್ನ ಖಂಡಿಸಿ ಮಹಾರಾಷ್ಟ್ರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದೆ.

Maharashtra Violence
Maharashtra Violence

By

Published : Nov 13, 2021, 12:43 PM IST

ಅಮರಾವತಿ (ಮಹಾರಾಷ್ಟ್ರ):ತ್ರಿಪುರಾ ಹಿಂಸಾಚಾರವನ್ನು (Tripura Violence) ಖಂಡಿಸಿ ಮಹಾರಾಷ್ಟ್ರದಲ್ಲಿ ಕೆಲ ಸಂಘಟನೆಗಳು (Muslim Organisations) ರಾಜ್ಯಾದ್ಯಂತ ಕರೆ ನೀಡಿದ್ದ ಬಂದ್ (Maharashtra Bandh) ಹಿಂಸಾಚಾರಕ್ಕೆ ತಿರುಗಿದ್ದು, ಹಿಂಸಾಚಾರಕ್ಕೆ ಕಾರಣರಾದವರನ್ನು ಸುಮ್ಮನೇ ಬಿಡುವುದಿಲ್ಲ ಎಂದು ಗೃಹ ಸಚಿವರು ಎಚ್ಚರಿಸಿದ್ದಾರೆ.

ಬಂದ್​ ಬೆಂಬಲಿಸಿ ಮಹಾರಾಷ್ಟ್ರದ ಅಮರಾವತಿ, ನಾಂದೇಡ್ ಮತ್ತು ನಾಸಿಕ್​​ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು, ಅಂಗಡಿ-ಮುಂಗಟ್ಟು ಹಾಗೂ ವಾಹನಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಅನೇಕ ಪೊಲೀಸರು ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿದ್ದಾರೆ.

ಇದನ್ನೂ ಓದಿ: watch video: ಜಕ್ಕುವಾ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ

ಘಟನೆ ನಡೆದ ಕೆಲವೇ ಗಂಟೆಗಳ ಬಳಿಕ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ಶಾಂತಿ ಕಾಪಾಡುವಂತೆ ಎಂದು ಮನವಿ ಮಾಡಿದ್ದಾರೆ. ಹಿಂಸಾಚಾರಕ್ಕೆ ಕಾರಣರಾದವರನ್ನು ಸುಮ್ಮನೇ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಸಂಬಂಧ ಈ ಸಂಬಂಧ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿದ್ದು, ಅಮರಾವತಿಯಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಲು ಆಯೋಜಕರು ಅನುಮತಿ ಪಡೆದಿರಲಿಲ್ಲ ಎಂದು ಅಮರಾವತಿ ನಗರ ಡಿಸಿಪಿ ವಿಕ್ರಂ ಸಾಲಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ತ್ರಿಪುರಾ ರಾಜ್ಯದಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರು, ಅದರಲ್ಲಿಯೂ ಮುಸ್ಲಿಮರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ಗಳು ಹರಿದಾಡುತ್ತಿದೆ. ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂಗಳ ಮೇಲೆ ನಡೆದ ಹಲ್ಲೆ ಬಳಿಕ ತ್ರಿಪುರಾದಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ABOUT THE AUTHOR

...view details