ಕರ್ನಾಟಕ

karnataka

ETV Bharat / bharat

ಪೊಲೀಸ್ ಠಾಣೆಗೆ ನುಗ್ಗಿ, ಕಾನ್ಸ್​ಟೇಬಲ್​​ಗೆ ಥಳಿಸಿದ ದುಷ್ಕರ್ಮಿಗಳು.. ವಿಡಿಯೋ ವೈರಲ್​ - ಪೊಲೀಸ್​ ಕಾನ್ಸ್​ಟೇಬಲ್​​ಗೆ ಥಳಿತ

ಯಾವುದೇ ಭಯವಿಲ್ಲದೇ ಪೊಲೀಸ್ ಠಾಣೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪು- ಹಿರಿಯ ಪೊಲೀಸ್ ಕಾನ್ಸ್​ಟೇಬಲ್ ಮೇಲೆ ಹಲ್ಲೆ- ದೆಹಲಿಯ ಆನಂದ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಘಟನೆ

ಪೊಲೀಸ್ ಠಾಣೆಗೆ ನುಗ್ಗಿ ಪೇದೆಗೆ ಥಳಿಸಿದ ದುಷ್ಕರ್ಮಿಗಳು...
ಪೊಲೀಸ್ ಠಾಣೆಗೆ ನುಗ್ಗಿ ಪೇದೆಗೆ ಥಳಿಸಿದ ದುಷ್ಕರ್ಮಿಗಳು...

By

Published : Aug 6, 2022, 6:03 PM IST

ನವದೆಹಲಿ:ಪೊಲೀಸ್ ಠಾಣೆಗೆ ನುಗ್ಗಿರುವ ದುಷ್ಕರ್ಮಿಗಳ ಗುಂಪೊಂದು ಹೆಡ್​ ಪೊಲೀಸ್​​ ಕಾನ್ಸ್​ಟೇಬಲ್​ಗೆ ಥಳಿಸಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಅದರ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ದೆಹಲಿಯ ಆನಂದ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್​ ಕಾನ್ಸ್​ಟೇಬಲ್​ ಮೇಲೆ ಹಲ್ಲೆ ನಡೆಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಜುಲೈ 31ರಂದು ಈ ಘಟನೆ ನಡೆದಿದೆ ಎನ್ನಲಾಗ್ತಿದ್ದು, ವಿಡಿಯೋ ಆಧರಿಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪೊಲೀಸ್ ಕಾನ್ಸ್​ಟೇಬಲ್ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ತುಣುಕನ್ನು ಮತ್ತೋರ್ವ ಪೊಲೀಸ್ ಸಿಬ್ಬಂದಿ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ 10-12 ಜನರ ಗುಂಪು ಪೊಲೀಸ್ ಕಾನ್ಸ್​ಟೇಬಲ್ ಸುತ್ತುವರೆದಿದ್ದು, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಅವರಿಗೆ ಕಪಾಳಮೋಕ್ಷ ಸಹ ಮಾಡಿದ್ದಾನೆ. ಘಟನೆ ವೇಳೆ ಯಾರೊಬ್ಬರೂ ಕೂಡ ಹಲ್ಲೆ ತಡೆಯುವ ಪ್ರಯತ್ನ ಮಾಡಿಲ್ಲ. ಹಲ್ಲೆ ವೇಳೆ ಕಾನ್​ಸ್ಟೇಬಲ್ ಕೈಮುಗಿದು​ ಕ್ಷಮೆ ಕೇಳುತ್ತಿರುವುದು ವಿಡಿಯೋದಲ್ಲಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೇದೆಗೆ ಥಳಿಸಿದ ದುಷ್ಕರ್ಮಿಗಳು...

ಪೊಲೀಸ್ ಸಿಬ್ಬಂದಿ ಮೇಲೆ ಯಾವ ಕಾರಣಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಶೋಧಕಾರ್ಯ ಆರಂಭಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಅಪರಾಧಿ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿರಿ:ಕೌಟುಂಬಿಕ ಕಲಹ: ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ, ಕಂದಮ್ಮಗಳು ಸಾವು

ABOUT THE AUTHOR

...view details