ರುದ್ರಪ್ರಯಾಗ (ಉತ್ತರಾಖಂಡ): ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಇನ್ನು ಮುಂದೆ ಛಾಯಾಚಿತ್ರ ಮತ್ತು ವಿಡಿಯೋಗಳನ್ನು ಕ್ಲಿಕ್ ಮಾಡುವಂತಿಲ್ಲ. ಕೇದಾರನಾಥ ದೇಗುಲದೊಳಗೆ ಮಹಿಳೆಯೊಬ್ಬರು ಶಿವಲಿಂಗದ ಮೇಲೆ ನೋಟುಗಳನ್ನು ಸುರಿಸುತ್ತಿರುವುದು, ಬಾಲಕಿಯೊಬ್ಬಳು ತನ್ನ ಪ್ರಿಯಕರನಿಗೆ ಪ್ರಪೋಸ್ ಮಾಡುವುದು ಮತ್ತು ಅಧಿಕಾರಿಗಳು ಆಕ್ಷೇಪಾರ್ಹವೆಂದು ಭಾವಿಸಿದ ಹಲವಾರು ಚಟುವಟಿಕೆಗಳನ್ನು ತೋರಿಸುವ ವೈರಲ್ ವಿಡಿಯೋಗಳ ಸರಣಿಯನ್ನು ಗಂಭೀರವಾಗಿ ಪರಿಗಣಿಸಿ, ಬದ್ರಿ ಕೇದಾರ ದೇವಾಲಯ ಸಮಿತಿಯು ಈ ಚಟುವಟಿಕೆಗಳ ಮೇಲೆ ನಿಷೇಧ ಹೇರಿದೆ.
ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳಿಂದ ಎಚ್ಚರಿಕೆ:ದೇವಾಲಯದ ಒಳಗೆ ಯಾವುದೇ ಛಾಯಾಗ್ರಹಣ ಮತ್ತು ವಿಡಿಯೋಗ್ರಫಿಗೆ ಅವಕಾಶವಿಲ್ಲ ಎಂಬ ಸಂದೇಶದೊಂದಿಗೆ ದೇವಾಲಯದ ಸಮಿತಿಯು ಆವರಣದಲ್ಲಿ ದೊಡ್ಡ ಅಕ್ಷರಗಳಲ್ಲಿ ಬೋರ್ಡ್ಗಳನ್ನು ಹಾಕಿದೆ. ಇಂತಹ ಚಟುವಟಿಕೆಗಳಲ್ಲಿ ಯಾರೇ ಹೊಣೆಗಾರರಾದರೂ ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದಲ್ಲದೇ ದೇವಸ್ಥಾನದ ಆವರಣದಲ್ಲಿ ಸಭ್ಯ ವಸ್ತ್ರಗಳನ್ನು ಧರಿಸುವಂತೆ ದೇವಸ್ಥಾನ ಸಮಿತಿ ವತಿಯಿಂದ ಧಾಮದಲ್ಲಿ ಬೋರ್ಡ್ ಕೂಡ ಹಾಕಲಾಗಿದೆ.
ದೇವಸ್ಥಾನದ ಆವರಣದಲ್ಲಿ ಬಾಯ್ಫ್ರೆಂಡ್ಗೆ ಪ್ರಪೋಸ್ ಮಾಡಿದ್ದ ಹುಡುಗಿ: ಇದಕ್ಕೂ ಮುನ್ನ ಮಹಿಳೆಯೊಬ್ಬರು ಗರ್ಭಗುಡಿಯಲ್ಲಿ ನೋಟುಗಳ ಸುರಿಮಳೆಗೈದ ವಿಡಿಯೋ ಕೋಲಾಹಲ ಸೃಷ್ಟಿಸಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ದೇವಸ್ಥಾನದ ಆವರಣದಲ್ಲಿ ಹುಡುಗಿಯೊಬ್ಬಳು ತನ್ನ ಬಾಯ್ಫ್ರೆಂಡ್ಗೆ ಪ್ರಪೋಸ್ ಮಾಡಿದ್ದಳು. ಈ ವಿಡಿಯೋಗಳು ವೈರಲ್ ಆದ ನಂತರ ಜನರು ಕೋಪದಿಂದ ಪ್ರತಿಕ್ರಿಯಿಸಿದ್ದರು ಮತ್ತು ಇಂತಹ ಘಟನೆಗಳಲ್ಲಿ ಅಧಿಕಾರಿಗಳ ಉದಾಸೀನತೆಯನ್ನು ಪ್ರಶ್ನಿಸಿದ್ದರು.
ಇದನ್ನೂ ಓದಿ:ಚಾರ್ಧಾಮ್ ಯಾತ್ರೆ 2023: ಉಖಿಮಠದಿಂದ ಕೇದಾರನಾಥ ದೇವಸ್ಥಾನಕ್ಕೆ ಡೋಲಿ ಯಾತ್ರೆ